ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಅಪಘಾತವೊಂದಕ್ಕೆ ಬಾಲಕ ಬಲಿಯಾಗಿದ್ದಾನೆ. ರಸ್ತೆ ಬದಿಯಲ್ಲಿ ನಿಂತಿದ್ದ ಅಮಾಯಕನ ಪ್ರಾಣಹರಣಕ್ಕೆ ಕಾರಣನಾದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ತಿಕ್ (12) ಸಾವಿಗೀಡಾದ ವಿದ್ಯಾರ್ಥಿ. ಮಂಗಳೂರು ತಾಲೂಕಿನ ಮುಡಿಪು ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಮುಡಿಪು ಕೃಷ್ಣನಗರ ನಿವಾಸಿ ಧರ್ನಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧರ್ನಪ್ಪ ಚಲಾಯಿಸುತ್ತಿದ್ದ ಕಾರು ಮೊದಲು ಪೊಲೀಸ್ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಮತ್ತು ಆಟೋರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು, ನಂತರ ರಸ್ತೆ ಪಕ್ಕ ನಿಂತಿದ್ದ ಕಾರ್ತಿಕ್​ಗೆ ಅಪ್ಪಳಿಸಿದೆ. ತೀವ್ರ ಗಾಯಗೊಂಡ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಲೆ ವತಿಯಿಂದ ಪಿಕ್​ನಿಕ್​ಗೆ ತೆರಳಿದ್ದ ಬಾಲಕ ನಾಪತ್ತೆ, ಸ್ಥಳೀಯರಿಂದ ಶುರುವಾಗಿದೆ ಹುಡುಕಾಟ
ಪಂಕ್ಚರ್ ಆಗಿದ್ದನ್ನು ರಿಪೇರಿ ಮಾಡುತ್ತಿದ್ದವನ ದೇಹವೇ ಛಿದ್ರಛಿದ್ರ; ಲಾರಿಗೆ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
