ರಾಯಚೂರು:ರಾಜ್ಯದಲ್ಲಿ ಹಬ್ಬದ ದಿನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ ಕಾರೊಂದು ನೀರಿನ ಟ್ಯಾಂಕ್​ಗೆ ಅಪ್ಪಳಿಸಿದೆ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ರಾಯಚೂರು ಜಿಲ್ಲೆ ಸಿರವಾರದ ಹರವಿ ಕ್ಯಾಂಪ್​ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಅದೇ ರಭಸದಲ್ಲಿ ರಸ್ತೆ ಬದಿಯಲ್ಲಿದ್ದ ನೀರಿನ ಟ್ಯಾಂಕ್​ಗೆ ಅಪ್ಪಳಿಸಿದೆ. ಇದರಿಂದಾಗಿ ಹರವಿ ಕ್ಯಾಂಪಿನ ಹನುಮೇಶ (21), ಚೌದ್ರಿ ಕ್ಯಾಂಪಿನ ರಾಜೇಶ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇವರೊಂದಿಗೆ ಕಾರಿನಲ್ಲಿದ್ದ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾನ್ವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ.
ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − ten =
Remember me
