ಶಿವಮೊಗ್ಗ:ಕಾರು- ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಳಿಯ ಮಂಚಿಕೊಪ್ಪದಲ್ಲಿ ನಡೆದಿದೆ.
ಹಲುಗಿನಕೊಪ್ಪದ ಮಲ್ಲಿಕಾರ್ಜುನ್ ಅವರ ಪತ್ನಿ ಜ್ಯೋತಿ(30, 4 ವರ್ಷದ ಪುತ್ರಿ ಸೌಜನ್ಯ(4) ಹಾಗೂ ತಾಯಿ ಗಂಗಮ್ಮ(50) ಮೃತ ದುರ್ದೈವಿಗಳು. ಇವರೆಲ್ಲರೂ ಶಿರಾಳಕೊಪ್ಪದಿಂದ ಹುಲಗಿನಕೊಪ್ಪ ಕಡೆಗೆ ಭಾನುವಾರ ರಾತ್ರಿ ಮಲ್ಲಿಕಾರ್ಜುನ್​ರ ಬೈಕ್​ನಲ್ಲಿ ತೆರಳುತ್ತಿದ್ದರು. ಅದೇ ವೇಳೆ ಹಿರೇಕರೂರು ಕಡೆಯಿಂದ ಶಿವಮೊಗ್ಗದತ್ತ ಕಾರೊಂದು ಹೋಗುತ್ತಿತ್ತು.
ಮಾರ್ಗಮಧ್ಯೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಾರು ಮತ್ತು ಬೈಕ್​ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಲ್ಲಿಕಾರ್ಜುನ್​ ಸ್ಥಿತಿ ಗಂಭೀರವಾಗಿದೆ. ಬೈಕ್​ನಲ್ಲಿದ್ದ ತಾಯಿ-ಪತ್ನಿ-ಮಗಳು ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮಗಳು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಳು. ಹೆಚ್ಚಿನ‌ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಕೊನೆಯುಸಿರೆಳೆದರೆ, ಶಿಕಾರಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಂಗಮ್ಮ ಮೃತಪಟ್ಟರು. ಶಿರಾಳಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲ, ನಾನೊಬ್ಬಳೇ ಇದ್ದೀನಿ ಬಾ… ಎಂದಾಕೆಯ ಮನೆಗೆ ಹೋದವನಿಗೆ ನರಕ ದರ್ಶನ!

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಎತ್ತಿಹಿಡಿದ ಸುಪ್ರೀಂಕೋರ್ಟ್​

ನಿನ್ನೆ ರಾತ್ರಿ ಗಂಗಾಮಾತೆ ಮೇಲೆ ಆಣೆ ಮಾಡಲು ಹೋದ ಹಾಸನದ ಯುವಕರಿಬ್ಬರು ದುರಂತ ಸಾವು!

ಚಂದ್ರು ಕಾರು 100 ಕಿಲೋ ಮೀಟರ್ ವೇಗದಲ್ಲಿತ್ತು… ಪ್ರಕರಣ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
