ರಾಯಚೂರು:ಧಾರವಾಡದ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬುಧವಾರ ನಸುಕಿನಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಿಠ್ಠಲ ನಗರದ ನಿವಾಸಿಗಳು. ಸಣ್ಣ ಗಂಗಣ್ಣ (56), ಪತ್ನಿ ಗಂಗಮ್ಮ (50), ಸಹೋದರ ಈರಣ್ಣ(40), ಮಗ ಹನುಮಂತ (20) ಮೃತರು. ಮಗಳು ಲಕ್ಷ್ಮೀ (18) ಮತ್ತು ಚಾಲಕ ಈರಣ್ಣ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗಂಗಣ್ಣ ಅವರಿಗೆ ಪಾರ್ಶ್ವವಾಯುಗೆ ಚಿಕಿತ್ಸೆ ಕೊಡಿಸಲೆಂದು ಕುಟುಂಬಸ್ಥರು ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದರು.
ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬುಧವಾರ ನಸುಕಿನ 3 ಗಂಟೆ ಸುಮಾರಿನಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರು. ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ ನಾಲ್ವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಾನ್ವಿಯ ವಿಠ್ಠಲ ನಗರದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ದುಡ್ಡು ಸಿಗುತ್ತೆ ಅಂತ ಗಂಡನ ಮನೆಗೆ ಓಡೋಡಿ ಬಂದವಳು ಆ ಮನೆಯಲ್ಲೇ ಹೆಣವಾದಳು!

https://www.vijayavani.net/matrimonial-groom-robbery/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
