ರಾಯಚೂರು:ಕಾರು ಮತ್ತು ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಯರದೊಡ್ಡಿ ತಾಂಡಾದ ಭಾರತಿ (29), ಆಕೆಯ ಪುತ್ರ ಉದಯ್ ಸಿಂಗ್ (11) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮುದಗಲ್ ಬಳಿಯ ಇಳಕಲ್ ರಸ್ತೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಈ ಸಾವು ಸಂಭವಿಸಿದೆ.
ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹೆಂಡ್ತಿಯನ್ನು ಚೆನ್ನಾಗಿ ನೋಡಿಕೊ’ ಎಂದ ಸಂಬಂಧಿಕರಿಬ್ಬರಿಗೂ ಇರಿದ; ಒಬ್ಬನ ಸಾವು, ಇನ್ನೊಬ್ಬನ ಪರಿಸ್ಥಿತಿ ಗಂಭೀರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
