ಚಾಮರಾಜನಗರ:ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಶವ ಕಾರ್​ ಟಾಪ್​ಗೆ ನೆಗೆದುಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಕೊಳ್ಳೆಗಾಲದ ನರೀಪುರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಉಮ್ಮತ್ತೂರು ಗ್ರಾಮದ ಮಹದೇವಸ್ವಾಮಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಮಹದೇವಸ್ವಾಮಿ ಅವರ ಮೃತದೇಹ ಕಾರ್ ಟಾಪ್​ಗೆ ನೆಗೆದುಬಿದ್ದಿದೆ.
ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶೇಷವೆಂದರೆ ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಸಾಗುತ್ತಿದ್ದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಕರೆದೊಯ್ಯಲು ಅವಕಾಶ ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಪಿಂಗ್ ಕಾಂಪ್ಲೆಕ್ಸ್​ನಿಂದ ಕೆಳಕ್ಕೆ ಬಿದ್ದ ಪ್ರೇಮಿಗಳು; ಯುವತಿ ಸಾವು, ಯುವಕ ಬಚಾವ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fourteen =
Remember me
