ಧಾರವಾಡ:ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್​ನಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕಾರಿನಲ್ಲಿದ್ದವರು ಕಾರು ಬಿಟ್ಟು ಕಾಲ್ಕಿತ್ತಿದ್ದಾರೆ. ಧಾರವಾಡದಲ್ಲಿ ಈ ಅಪಘಾತ ಸಂಭವಿಸಿದೆ.
ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರಲ್ಲಿನ ವೆಂಕಟಾಪುರ ಬಳಿ ಕಾರು-ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೈಕ್​ನಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೊಗೂರ ಗ್ರಾಮದ ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಮತ್ತು ತಿಗಡೊಳ್ಳಿ ನಿವಾಸಿ ರಾಜು ಸಾವಿಗೀಡಾದವರು.
ಇದನ್ನೂ ಓದಿ:ಗಾಂಜಾ ಮತ್ತಲ್ಲಿ ಆಸ್ಟ್ರೇಲಿಯಾ ಪ್ರಜೆಯ ದರೋಡೆ: ಮಾದಕ ವಸ್ತು ವಿರೋಧಿ ದಿನವೇ ಸಿಕ್ಕಿಬಿದ್ದ..
ಇವರು ಧಾರವಾಡಕ್ಕೆ ನೇರಳೆಹಣ್ಣು ಮಾರಲು ಹೋಗಿದ್ದರು. ಮೂವರು ಸ್ಥಳದಲ್ಲೇ ಸಾವಿಗೀಡಾದ್ದನ್ನು ನೋಡಿ ದಿಗಿಲುಗೊಂಡು ಕಾರಿನಲ್ಲಿದ್ದವರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಗರಗ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇಲ್ಲಿ ಸದ್ಯಕ್ಕೆ ಪಾನಿಪುರಿ ಮಾರಾಟ ನಿಷೇಧ: ಕಾರಣ ಮತ್ತೇನೂ ಅಲ್ಲ, ಇದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
