ಗದಗ:ಇಲ್ಲೊಂದು ಕುಟುಂಬಕ್ಕೆ ನೋವಿನ ಮೇಲೆ ಮತ್ತೆ ನೋವು ಎಂಬಂಥ ಪರಿಸ್ಥಿತಿ ಉಂಟಾಗಿದೆ. ಅದರಲ್ಲೂ ಈಗಾಗಲೇ ಸಾವಿನ ದುಃಖದಲ್ಲಿದ್ದ ಕುಟುಂಬಸ್ಥರಿಗೆ ಮತ್ತೊಂದು ಸಾವಿನ ಸುದ್ದಿ ಬರಸಿಡಿಲಾಗಿ ಎರಗಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ‌ ಕೊಣ್ಣೂರ ಸಮೀಪ ಇಂಥದ್ದೊಂದು ದುರಂತ ಸಂಭವಿಸಿದೆ. ಕೆಎಸ್ಆರ್​​ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಪಘಾತಕ್ಕೀಡಾದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಆ ಪೈಕಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಶಿರಸಿ ಮೂಲದವರು ಎಂದು ತಿಳಿದುಬಂದಿದೆ. ಸಂಬಂಧಿಕರ ಅಂತ್ಯಸಂಸ್ಕಾರಕ್ಕಾಗಿ ಲಿಂಗಸುಗೂರಿಗೆ ತೆರಳಿದ್ದರು. ಅಲ್ಲಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರ ಕುರಿತ ಹೆಚ್ಚಿನ ಹಾಗೂ ಖಚಿತ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆನಡಾದಲ್ಲಿ ಕನ್ನಡ ಮಾತು: ಚಂದ್ರ ಆರ್ಯರಿಗೆ ಭಾರಿ ಬೆಂಬಲ; ಹಿಂಬಾಲಕರ ಸಂಖ್ಯೆಯಲ್ಲಿ ಹೆಚ್ಚಳ…

ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
