ಚಿಕ್ಕಬಳ್ಳಾಪುರ:ನಾಲ್ವರು ಪ್ರಯಾಣಿಸುತ್ತಿದ್ದ ಕಾರೊಂದು ಇದ್ದಕ್ಕಿದ್ದಂತೆ ಧಗಧಗನೆ ಹೊತ್ತಿ ಉರಿದು ಆತಂಕದ ವಾತಾವರಣಕ್ಕೆ ಕಾರಣವಾದ ಪ್ರಕರಣವೊಂದು ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಅವಘಡ ಸಂಭವಿಸಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ನಗರ ಪೊಲೀಸ್ ಠಾಣೆ ಸಮೀಪದ ಅಂಡರ್​ಪಾಸ್​ನಲ್ಲಿ ಕಾರು ಬರುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ಮಾರುತಿ ಕಂಪನಿಯ ಆಲ್ಟೋ ಕಾರು ಇದಾಗಿದ್ದು, ಇದರಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು.
ಕಾರಿನಲ್ಲಿದ್ದವರು ಮುರುಗಮಲ್ಲಾ ದೇವಸ್ಥಾ‌ನಕ್ಕೆ ಹೋಗಿದ್ದರು. ಅದೃಷ್ಟವಶಾತ್​ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಬಹುತೇಕ ಸುಟ್ಟುಹೋಗಿದೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಶಿಡ್ಲಘಟ್ಟ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.
ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
