ಕೋಲಾರ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಪಲ್ಟಿಯಾಗಿ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಗ್ರಾಮದ ಬಳಿ ನಡೆದಿದೆ.
ಕುಟುಂಬವೊಂದು ಆಂಧ್ರಪ್ರದೇಶದ ಕಡಪದಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕುಟುಂಬವೊಂದು ಕಡಪಾದಿಂದ ಬೆಂಗಳುರಿನತ್ತ ಬರುತ್ತಿತ್ತು. ಈ ವೇಳೆ ಶ್ರೀನಿವಾಸಪುರದ ರಾಯಲ್ಪಾಡು ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಇದನ್ನೂ ಓದಿ:ಹೆರಿಗೆ ವಾರ್ಡ್​ಗೆ ಪ್ರವೇಶ ನಿರಾಕರಿಸಿದ ವೈದ್ಯರು; ಆಸ್ಪತ್ರೆ ಕಾರಿಡಾರ್​ನಲ್ಲೇ ಮಗುವಿಗೆ ಜನ್ಮ
ಸಿಎನ್​ಜಿ ಪೆಟ್ರೋಲ್​ ವಾಹನವಾಗಿದ್ದರಿಮದ ಕ್ಷಣಾರ್ಧದಲ್ಲೇ ಇಡೀ ಕಾರು ಹೊತ್ತು ಉರಿದಿದೆ. 30 ನಿಮಿಷಗಳಿಗೂ ಅಧಿಕ ಕಾಲ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ವಿಷಯ ತಿಳಿದು ಸ್ಥಳ್ಕಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
