ಮೂಲ್ಕಿ:ಕೊಲ್ನಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿ ಸಂಪೂರ್ಣ ಭಸ್ಮವಾಗಿದ್ದು, ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಕಾರ್ನಾಡು ನಿವಾಸಿ ಫಯಾಝ್ ಅವರು ಕಾರನ್ನು ಪಣಂಬೂರಿನಿಂದ ಮೂಲ್ಕಿಗೆ ಚಲಾಯಿಸಿಕೊಂಡು ಬರುತ್ತಿದ್ದಾಗ ಕೊಲ್ನಾಡು ಬಳಿ ಕಾರಿನ ಬಾನೆಟ್ ಒಳಗಡೆ ಬೆಂಕಿ ಹತ್ತಿರುವುದನ್ನು ಗಮನಿಸಿದ್ದರು. ತಕ್ಷಣ ಕಾರನ್ನು ರಸ್ತೆ ಬದಿ ನಿಲ್ಲಿಸಿ ಹೊರಧಾವಿಸಿದರು. ಈ ಸಂದರ್ಭ ಅಕ್ಕಪಕ್ಕದವರು ನೋಡುತ್ತಿದ್ದಂತೆ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬಳಿಕ ಅಗ್ನಿಶಾಮಕದಳದವರು ಆಗಮಿಸಿ ಬೆಂಕಿ ನಂದಿಸಿದರು. ಈ ಸಂದರ್ಭ ಕಾರಿನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಳ್ಳುವ ಭೀತಿ ಕಾರಣ ಸಂಚಾರಿ ಪೊಲೀಸರು ಮತ್ತು ಮೂಲ್ಕಿ ಪೊಲೀಸರು ಹೆದ್ದಾರಿಯ ಒಂದೇ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

2023ರಲ್ಲಿ ವಿಧಾನಸಭೆ ಎಲೆಕ್ಷನ್: ಮಂಡ್ಯದಲ್ಲಿ ಟಿಕೆಟ್​ಗಾಗಿ ಹಾಲಿ ಶಾಸಕ- ಮಾಜಿ ಸಂಸದರ ಫೈಟ್​

ವಿಧಾನಪರಿಷತ್​ಗೆ ಹೊಸ ಚೇರ್ಮನ್ ಬಸವರಾಜ ಹೊರಟ್ಟಿ! ಕಾಂಗ್ರೆಸ್​ ಫುಲ್​ ಸೈಲೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
