ಉತ್ತರ ಕನ್ನಡ:ಕಾರೊಂದು ವಿದ್ಯುತ್ ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಉರಿದಿದ್ದು, ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಗ್ರಾಮದ ಹಾರವಾಡ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಟ್ರಾನ್ಸ್​ಫಾರ್ಮರ್​ಗೆ ಡಿಕ್ಕಿ ಹೊಡೆದ ತೀವ್ರತೆಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಪರಿಣಾಮವಾಗಿ ಆಂಧ್ರಪ್ರದೇಶ ಮೂಲದ ರವಿತೇಜ (25) ಎಂಬವರು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಕ್ರಿಕೆಟ್​ ಬೆಟ್ಟಿಂಗ್​ನಿಂದ ದಾಂಪತ್ಯದಲ್ಲಿ ಬಿರುಕು; ಪತಿಯಿಂದಲೇ ಪತ್ನಿಯ ಕೊಲೆ?
ಕಾರು ಮುರುಡೇಶ್ವರದಿಂದ ಗೋವಾ ಕಡೆಗೆ ತೆರಳುತ್ತಿದ್ದು, ಅದರಲ್ಲಿದ್ದ ಇನ್ನು ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಆಗಿದೆ ಎನ್ನಲಾಗಿದೆ. ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
