ಕೋಲಾರ:ಭೀಕರ ಅಪಘಾತವೊಂದರಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.
ಕೋಲಾರ ತಾಲೂಕಿನ ಶಾಪೂರು ಕ್ರಾಸ್ ಬಳಿ ಇಂದು ಈ ಅಪಘಾತ ಸಂಭವಿಸಿದೆ. ಕಾರು ಚಾಲಕ ವಿಮಲ್​ (27) ಮತ್ತು ಶರೀನಾ (22) ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ ಹರ್ಷಿತ, ಡೇವಿಡ್, ವಿಮೋನಿಯಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇವರೆಲ್ಲರೂ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತರು. ಚೆನ್ನೈನಿಂದ ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದರೂ ಉಳಿಸಿಕೊಳ್ಳಲು ಆಗಲಿಲ್ಲ. ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಗಳೂರಲ್ಲಿ ಮತ್ತೆ ಆತಂಕ?; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಬೆದರಿಕೆ!
ಭೂಕಂಪ: 2 ಬಾರಿ ಕಂಪಿಸಿದ ಭೂಮಿ, ಶಬ್ದಕ್ಕೆ ಹೆದರಿ ಮನೆಯಿಂದ ಹೊರಗೆ ಓಡಿ ಬಂದ ಜನರು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 9 =
Remember me
