ಹುಬ್ಬಳ್ಳಿ:ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನೊಳಗೆ ಸಾವುಬದುಕಿನಲ್ಲಿ ಹೋರಾಡುತ್ತಿದ್ದ ನಾಲ್ವರ ಜೀವವನ್ನು ಸ್ಥಳೀಯರಲೇ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ತಮಿಳುನಾಡು ಮೂಲದ ಕಾರಿನಲ್ಲಿ ಐವರು ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದರು. ಹುಬ್ಬಳ್ಳಿಯ ಅದರಗುಂಚಿ‌ ಕ್ರಾಸ್‌ ಬಳಿ ರಸ್ತೆಬದಿ ನಿಂತಿತ್ತ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಇದನ್ನೂ ಓದಿರಿಹಸುಗೂಸನ್ನು ಬಾಳೆಎಲೆಯಲ್ಲಿ ಸುತ್ತಿ ಹೋಟೆಲ್​ನ ಕಸದ ತೊಟ್ಟಿಯಲ್ಲಿ ಎಸೆದರು!
ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಅಯ್ಯನಾರ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೆ ನಾಲ್ವರು ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ನರಳಾಡುತ್ತಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಕಾರಿನ ಗ್ಲಾಸ್ ಒಡೆದು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬೆಂಗಳೂರಿನಲ್ಲಿ ಗಲಭೆ ಕುರಿತು ಜಮೀರ್​ ಅಹ್ಮದ್​ ಸರಣಿ ಟ್ವೀಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
