ಬೆಂಗಳೂರು:ಮನೆ ಎದುರು ನಿಲುಗಡೆ ಮಾಡಿದ್ದ ಕಾರಿಗೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ಪ್ರಕರಣ ಮಹಾಲಕ್ಷ್ಮೀ ಲೇಔಟ್ ನಡೆದಿದೆ. ಜೆ.ಸಿ.ನಗರ ನಿವಾಸಿ ಸುಬ್ರಹ್ಮಣ್ಯ ಎಂಬುವವರಿಗೆ ಸೇರಿದ ಮಹೀಂದ್ರ ಎಕ್ಸ್‌ಯುವಿ-300 ಕಾರು ಬೆಂಕಿಯಿಂದ ಸುಟ್ಟು ಕರಕಲಾಗಿದೆ.
ಜೆ.ಸಿ.ನಗರದ ಪೈಪ್‌ಲೈನ್ ರಸ್ತೆಯ 22ನೇ ಮುಖ್ಯರಸ್ತೆಯಲ್ಲಿ ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಗಳ ದುಷ್ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ನೀಡಲಾದ ದೂರಿನ ಮೇರೆಗೆ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲ್ಮೆಟ್ ಧರಿಸಿದ್ದ ಇಬ್ಬರು ದುಷ್ಕರ್ಮಿಗಳು ಪಕ್ಕದ ಬೀದಿಯಲ್ಲಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿದ್ದಾರೆ. ಬಳಿಕ ನಡೆದುಕೊಂಡು ಸುಬ್ರಹ್ಮಣ್ಯ ಅವರ ಮನೆ ಬಳಿಗೆ ಬಂದು ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರು ಸುಟ್ಟು ಕರಕಲಾಗಿದೆ. ಕಾರು ಹೊತ್ತಿ ಉರಿಯುವ ಸಂದರ್ಭದಲ್ಲಿ ಮನೆಗಳಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದ್ವೇಷದ ಹಿನ್ನೆಲೆಯಲ್ಲಿ ದುಷ್ಕೃತ್ಯ!:ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ. ಮೂರು ತಿಂಗಳ ಹಿಂದೆ ಸಹ ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು ಎನ್ನಲಾಗಿದೆ. ಈ ಘಟನೆ ಸಂಬಂಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
6 ತಿಂಗಳ ಕಾಲ ಒಂದೊಂದಾಗಿ ಕಾಣೆಯಾಗಿದ್ದವು ಮನೆಯೊಳಗಿದ್ದ ಆಭರಣಗಳು!; ಕೊನೆಗೂ ಬಯಲಾಯ್ತು ಅಸಲಿಯತ್ತು
ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
