ಬೆಳಗಾವಿ:ಪೆಟ್ರೋಲ್ ಟ್ಯಾಂಕರ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಶಾಂತಿನಗರ ನಿವಾಸಿ ಸಾಗರ ಕೇಶನ್ನವರ (34) ಸಾವಿಗೀಡಾದ ವ್ಯಕ್ತಿ. ಇವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಇವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಪೆಟ್ರೋಲ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಇನ್ನು ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್‌ನಿಂದ ಜನರು ಪೆಟ್ರೋಲ್ ತುಂಬಿಸಿಕೊಂಡು ಸನ್ನಿವೇಶವೂ ಕಂಡುಬಂತು. ಟ್ರ್ಯಾಕ್ಟರ್ ಸಹಾಯದಿಂದ ಪೆಟ್ರೋಲ್ ಟ್ಯಾಂಕರ್ ಮೇಲೆತ್ತಲು ಹರಸಾಹಸ ನಡೆಸಲಾಯಿತು. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
‘ನನ್ನನ್ಯಾರೋ ಕೊಲೆ ಮಾಡ್ತಾರೆ’ ಎಂದು ಪೊಲೀಸರಿಗೆ ಆಗಾಗ ಕರೆ ಮಾಡ್ತಿದ್ದ ಮಹಿಳೆಯ ಕೊಲೆ!

ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಎಬಿವಿಪಿ ಧ್ವಜ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
