ಹಾವೇರಿ:ನಿಂತಿದ್ದ ಕ್ಯಾಂಟರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾಗಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಣೇಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ 4ರ ಕಮದೋಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಹನುಮಂತಪ್ಪ (65), ಗೀತಾ (55) ಮತ್ತು ಶಿವಾನಿ (10) ಮೃತರು. ಗಾಯಾಳು ರೇಣುಕಾರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹರಿಹರ ತಾಲೂಕಿನ ಕುಂಬಳೂರು ಗ್ರಾಮದ ನಿವಾಸಿಗಳು.
ಇದನ್ನೂ ಓದಿ:ಬಿಡಿಎ ಕಚೇರಿಯೇ ನಕಲಿ!; ಸಿಕ್ಕಿಬಿದ್ರು ನಕಲಿ ದಾಖಲೆ ತಯಾರಿಸುತ್ತಿದ್ದ ಖದೀಮರು, ತಪ್ಪಿತು 300 ಕೋಟಿ ರೂ. ಭೂಹಗರಣ
ಅಪಘಾತದ ತೀವ್ರತೆಗೆ ಬಾಲಕಿಯ ಮುಖ ನಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆ ಕಂಡು ದಾರಿಹೋಕರು ಬೆಚ್ಚಿಬಿದ್ದಿದ್ದಾರೆ. ಮದುವೆಗೆಂದು ಹುಬ್ಬಳ್ಳಿಗೆ ಹೋಗಿ ಹರಿಹರಕ್ಕೆ ಮರಳಿ ಬರುವಾಗ ಅಪಘಾತ ಸಂಭವಿಸಿದೆ.
ಕಾರು ಚಾಲಕನ ಅತಿವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಲಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್​ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
