ಬೆಳಗಾವಿ:ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿರುವ ಪತಿ ಪರಿಸ್ಥಿತಿ ಚಿಂತಾಜನಕವಾಗಿದೆ.
ಬೆಳಗಾವಿ ಜಿಲ್ಲೆ ಹುಕ್ಕಾರಿ ತಾಲೂಕಿನ ನರಸಿಂಗಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವೈದ್ಯೆ ಡಾ. ಶ್ವೇತಾ ಎಸ್. ಮುರಗೋಡ (40), ಪುತ್ರಿ ಶಿಯಾ ಮುರಗೋಡ (7) ಮೃತಪಟ್ಟವರು. ವೈದ್ಯ ಸಚಿನ ಮುರಗೋಡ ತೀವ್ರ ಗಾಯಗೊಂಡಿದ್ದಾರೆ.
ಬೆಳಗಾವಿ ನಗರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಕೇಶ್ವರ ಪಟ್ಟಣಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ನರಸಿಂಗಪುರ ಗ್ರಾಮದ ಬಳಿಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಕ್ಯಾಂಟರ್‌ಗೆ ಇವರ ಇನೋವಾ ವೇಗವಾಗಿ ಡಿಕ್ಕಿ ಹೊಡೆದಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
