ಬೆಂಗಳೂರು:ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಅಂಗವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಲು ರಾಜ್ಯಮಟ್ಟದ ವ್ಯಂಗ್ಯ ಚಿತ್ರಕಾರರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.
ವಿಧಾನಸೌಧದ ಪೂರ್ವದಿಕ್ಕಿನ ಮುಂಬಾಗದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಹಾಗೂ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ಚಿತ್ರ ಸಾವಿರ ಪದಗಳಿಗೆ ಸಮಾನ ಎಂಬ ನಾಣ್ಣುಡಿಯಂತೆ ಒಂದು ಗಂಟೆ ಭಾಷಣದಲ್ಲಿ ಹೇಳುವ ವಿಷಯವನ್ನು ವ್ಯಂಗ್ಯಚಿತ್ರಕಾರರು ಒಂದು ಚಿತ್ರದಲ್ಲಿ ಹೇಳಬಲ್ಲರು. ಇದೊಂದು ಅತ್ಯಂತ ಪರಿಣಾಮಕಾರಿ ಜಾಗೃತಿ ಮಾಧ್ಯಮವಾಗಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಲೇಬೇಕು, ಎಲ್ಲರೂ ಭಾಗವಹಿಸಿದಾಗ ಮಾತ್ರ ಉತ್ತಮ ನಾಯಕರನ್ನು ಚುನಾಯಿಸಲು ಸಾಧ್ಯ ಎಂದರು.
ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಸಾರ್ವಜನಿಕರಿಗೆ ಮತದಾನದ ಮಹತ್ವವನ್ನು ಸಾರುವ ಅಂಗವಾಗಿ ಈ ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.
ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮರಾವ್, ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್. ವಸ್ತ್ರದ್, ಮಾಹಿತಿ ತಂತ್ರಜ್ಞಾನ ಹಾಗೂ ಮಾಧ್ಯಮ ವಿಶೇಷ ಅಧಿಕಾರಿಯಾದ ಸೂರ್ಯಸೇನ್ ಇನ್ನಿತರರು ಉಪಸ್ಥಿತರಿದ್ದರು.
2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವ್ಯಂಗ್ಯಚಿತ್ರಗಳನ್ನು ಆನ್‌ಲೈನ್‌ನಲ್ಲಿ ಸಹ ಆಹ್ವಾನಿಸಲಾಗಿತ್ತು. ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ 30ಕ್ಕೂ ಹೆಚ್ಚು ಕಲಾವಿದರು ತಮ್ಮ ವ್ಯಂಗ್ಯಚಿತ್ರಗಳನ್ನು ಇಮೇಲ್ ಮೂಲಕ ಕಳುಹಿಸಿಕೊಟ್ಟಿದ್ದಾರೆ, ಅಂತಹುಗಳಲ್ಲಿ ಆಯ್ದ ಕೆಲವು ಚಿತ್ರಗಳನ್ನು ಮುದ್ರಿಸಿ ಪ್ರದರ್ಶನಕ್ಕೆ ಇಡಲಾಗಿತ್ತು. ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.
ವಿಧಾನಸೌಧ ನೋಡಲು ಆಗಮಿಸಿದ್ದ ಸಾವಿರಾರು ಜನರು ಸ್ಥಳದಲ್ಲಿ ಚಿತ್ರ ರಚಿಸುತ್ತಿದ್ದ ಕಲಾವಿದರನ್ನು ಹಾಗೂ ಪ್ರದರ್ಶನವನ್ನು ವೀಕ್ಷಿಸಿದರು. ಕಾರ್ಯಾಗಾರದಲ್ಲಿ ಚಿಕ್ಕ ಮಕ್ಕಳು ದೊಡ್ಡವರ ಮತದಾನದ ಕುರಿತು ಬಿಡಿಸುತ್ತಿದ್ದ ಚಿತ್ರಗಳು ನೋಡುಗರನ್ನು ಚಕಿತಗೊಳಿಸಿದವು.ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ನೂರಾರು ಚಿತ್ರಗಳನ್ನು ರಚಿಸಿದರು.ಸ್ಥಳದಲ್ಲಿ ವಿಡಿಸಿದ ಚಿತ್ರಗಳನ್ನು ಇಂದಿನ ಕಾರ್ಯಕ್ರಮದಲ್ಲಿ ಪ್ರದರ್ಶನ ಮಾಡಲಾಯಿತು. ಈ ಕಾರ್ಯಾಗಾರದಲ್ಲಿ ಉತ್ತಮ ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 15 =
Remember me
