ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್​ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು.
ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್​ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಲು ನಿರಾಕರಿಸಿದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ಧ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:ಪಶುವೈದ್ಯಕೀಯ ಇಲಾಖೆಗೆ ಪ್ರ’ಭಾರ’
ಜಿಲ್ಲಾ ಆರೋಗ್ಯ ಅಧಿಕಾರಿ ನಾಗರಾಜ್ ಎಂಬುವರು ಕೊಟ್ಟ ದೂರಿನ ಮೇರೆಗೆ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆಯ ಮುಖ್ಯಸ್ಥ ದೀಪಕ್ ಬಲಾನಿ, ದೀಪ್ತಿ ಹಾಗೂ ದೀಪಕ್ ಅಗರೆಕಡ್ ಎಂಬುವರ ವಿರುದ್ಧ ಸರ್ಕಾರದ ಆದೇಶ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜು.29ರಂದು ಐಎಎಸ್ ಅಧಿಕಾರಿ ಉಮಾ ಮಹಾದೇವ್, ಐಪಿಎಸ್ ಸುನೀಲ್ ಅಗರ್​ವಾಲ್, ನೋಡಲ್ ಅಧಿಕಾರಿ ಚನ್ನಕೇಶವ ಅವರು ಪರಿಶೀಲನೆಗಾಗಿ ದೇವರಬೀಸನಹಳ್ಳಿಯಲ್ಲಿರುವ ಸಕ್ರಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಇದನ್ನೂ ಓದಿ:ಸಿವಿಲ್ ಇಂಜಿನಿಯರ್ ನೇಮಕ ಪ್ರಕ್ರಿಯೆ ಗುಮಾನಿ
ಸರ್ಕಾರದ ಆದೇಶದಂತೆ ಕರೊನಾ ಸೋಂಕಿತರ ಚಿಕಿತ್ಸೆಗೆ ಶೇ. 50 ಬೆಡ್​ಗಳನ್ನು ಮೀಸಲಿರಿಸಲಾಗಿದೆ. ಜೂ.23ರಿಂದ ಜು.29ರವರೆಗಿನ ಅವಧಿಯಲ್ಲಿ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಬೆಡ್​ಗಳ ವಿವರ ಕೇಳಿದ್ದರು. ಈ ವೇಳೆ ಆಸ್ಪತ್ರೆಯ ಮುಖ್ಯಸ್ಥ ಮಾಹಿತಿ ನೀಡಲು ನಿರಾಕರಿಸಿ, ಸರ್ಕಾರಿ ಆದೇಶವನ್ನು ಉಲ್ಲಂಸಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೊಟ್ಟ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಕುಂತಲಾದೇವಿಗೆ 40 ವರ್ಷ ನಂತರ ಗಿನ್ನೆಸ್ ಗೌರವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 8 =
Remember me
