ಕೋಲಾರ:ಜಿಪಂ ನಿರ್ಗಮಿತ ಸಿಇಒ ಹಾಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಚಿನ್ನ, ಬೆಳ್ಳಿ ಉಡುಗೊರೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಶ್ರೀನಿವಾಸಪುರ ತಾಪಂ ಇಒ ಹಾಗೂ 9 ಪಿಡಿಒಗಳ ಮೇಲೆ ತನಿಖೆ ನಡೆಸಿ ವರದಿ ನೀಡು ವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸಿಬಿಗೆ ಆದೇಶಿಸಿದೆ.
ಕಳೆದ ಆ.23ರಂದು ಕೋಲಾರ ಜಿಪಂನಲ್ಲಿ ನಡೆದ ಸಮಾರಂಭದಲ್ಲಿ ಶ್ರೀನಿವಾಸಪುರ ತಾಪಂ ಇಒ ಎಸ್.ಆನಂದ್ ಹಾಗೂ 9 ಪಿಡಿಒಗಳು ಕೆಸಿಎಸ್ ನಿಯಮಗಳಿಗೆ ವಿರುದ್ಧವಾಗಿ ಹಾಗೂ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಬೆಳ್ಳಿಗದೆ, ಕಿರೀಟ ಹಾಗೂ ಚಿನ್ನದ ಉಂಗುರವನ್ನು ನೀಡುವ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರೊಬ್ಬರು ಎಸಿಬಿಗೆ ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ 2020ರ ಜೂ.17ರಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಇದನ್ನೂ ಓದಿ:ಕ್ವಾರಂಟೈನ್ ಕಟ್ಟೆಚ್ಚರಕ್ಕೆ ಜನಬಲ
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾ ಧೀಶ ಎಂ.ಎಲ್.ರಘುನಾಥ್ ಆ.25ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಆದೇಶ ನೀಡಿದ್ದಾರೆ.
ಸೋಂಕು ದೃಢಪಟ್ಟ 3 ದಿನಕ್ಕೆ ಆಸ್ಪತ್ರೆಗೆ | ಸಂಪರ್ಕಿತರ ಕ್ವಾರಂಟೈನ್ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 8 =
Remember me
