ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಅಕ್ರಮ ಡಿ ನೋಟಿಫಿಕೇಷನ್​ ಪ್ರಕರಣವನ್ನು ರಾಜ್ಯ ಹೈಕೋರ್ಟ್​ ವಜಾ ಮಾಡಿದೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದೆ. ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್​ವೈಗೆ ಮುಕ್ತಿ ದೊರೆತಿದೆ.
ಇದನ್ನೂ ಓದಿ:ಉಚಿತ ವಿದ್ಯುತ್​ ಪಡೆಯಲು ಷರತ್ತುಗಳು ಅನ್ವಯ: ಸಚಿವ ಜಾರ್ಜ್​
ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೂ ತನಿಖೆ ನಡೆಸಿತ್ತು. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್​ವೈ ಹೈಕೋರ್ಟ್​ ಮೆಟ್ಟಿಲೇರಿದ್ದರು. ಸುಧೀರ್ಘ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ವಜಾ ಮಾಡಿ ಮಾಜಿ ಸಿಎಂಗೆ ದೊಡ್ಡ ರಿಲೀರ್ಫ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
