ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ಈ ಹಿಂದಿನ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ವಾದ ಮಂಡಿಸಲು ರಾಜ್ಯ ಸರ್ಕಾರ ಹೈಕೋರ್ಟ್ ನಿರ್ದೇಶಿಸಿದೆ.
ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ ಅವರು, ಕೆಲವು ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲಾ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್ ಜನರಲ್ ಅವರು ಸಮಯ ಕೋರಿದ್ದಾರೆ. ಹೀಗಾಗಿ, ೨೦೨೪ರ ಜನವರಿ ೫ರಂದು ಎಜಿ ವಿಸ್ತೃತವಾಗಿ ಉತ್ತರಿಸಬೇಕು ಎಂದು ಹೇಳಿ ನ್ಯಾಯಾಲಯವು ವಿಚಾರಣೆ ಮುಂದೂಡಿತು. ಇದಕ್ಕೂ ಮುನ್ನ ದಳವಾಯಿ ಅವರು ವೈಯಕ್ತಿಕವಾಗಿ ಬಾದಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್ ಕಾನೂನಿಗೆ ಚಾಲನೆ ನೀಡಬಹುದು ಎಂದರು. ಇದಕ್ಕೆ ಪೀಠವು ಸಹಮತಿಸಿತು.
ಏನಿದು ಪ್ರಕರಣ? :೨೦೧೯ರಲ್ಲಿ ಬಿಜೆಪಿ ಸರ್ಕಾರವು ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆ ಸಿಬಿಐಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ.ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು, ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. ೨೮ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + six =
Remember me
