ಪವಿತ್ರಾ ಕುಂದಾಪುರ ಬೆಂಗಳೂರು
ಕರ್ನಾಟಕ ಲೇವಾದೇವಿದಾರರ ಕಾಯ್ದೆ ಅನ್ವಯ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ದಾಳಿ ನಡೆಸುವ ಹಾಗೂ ಜಪ್ತಿ ಮಾಡುವ ಅಧಿಕಾರ ಪೊಲೀಸ್ ಅಧಿಕಾರಿಗಳಿಗೆ ಇಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಅಲೋಕ್ ಮೋಹನ್ ಲಿಖಿತ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಅಧಿಕಾರ ವ್ಯಾಪ್ತಿಯ ಕುರಿತು ಸ್ಪಷ್ಟ ಮಾರ್ಗಸೂಚಿ ಹೊರಡಿಸುವಂತೆ ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಡಿಜಿಪಿ ಈ ಆದೇಶ ಹೊರಡಿಸಿದ್ದಾರೆ.
ಲೇವಾದೇವಿದಾರರ ಕಾಯ್ದೆಯಡಿ ತಮ್ಮವಿರುದ್ಧ ಬೆಂಗಳೂರಿನ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಎಲ್.ಯು. ಸತೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದ್ ರಾಜು ಅವರಿದ್ದ ನ್ಯಾಯಪೀಠ ಮಾ.1ರಂದು ಡಿಜಿಪಿಗೆ ನಿರ್ದೇಶನ ಕೊಟ್ಟಿತ್ತು.
ಈ ಹಿನ್ನೆಲೆಯಲ್ಲಿ ಲಿಖಿತ ಆದೇಶ ಹೊರಡಿಸಿರುವ ಡಿಜಿಪಿ, ಇಂತಹ ಆರೋಪದಲ್ಲಿ ದೂರು ಸ್ವೀಕರಿಸಿದ ಸಂದರ್ಭದಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ನಡೆಸುವ ಹಾಗೂ ವಸ್ತುಗಳನ್ನು ಜಪ್ತಿ ಮಾಡುವ ಅಧಿಕಾರ ಪೊಲೀಸ್ ಅಧಿಕಾರಿಗೆ ಇಲ್ಲ. ಆದ್ದರಿಂದ ದೂರು ಬಂದ ತಕ್ಷಣವೇ ಸಹಕಾರ ಸಂಘಗಳ ರಿಜಿಸ್ಟ್ರಾರ್ ಅಥವಾ ಸಹಾಯಕ ರಿಜಿಸ್ಟ್ರಾರ್ ಗಮನಕ್ಕೆ ತರಬೇಕು. ಕಾನೂನು ಬದ್ಧವಾಗಿ ರಿಜಿಸ್ಟ್ರಾರ್ ಅಥವಾ ಸಹಾಯಕ ರಿಜಿಸ್ಟ್ರಾರ್ ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಡಿಜಿಪಿ ಸ್ಪಷ್ಟಪಡಿಸಿದ್ದಾರೆ.
ಹೈಕೋರ್ಟ್ ಹೇಳಿದ್ದೇನು?
– ಕಾಯ್ದೆಯನ್ವಯ ವ್ಯವಹಾರ ನಡೆದಿಲ್ಲ ಎಂದು ದೂರು ಬಂದರೆ ಕಾನೂನಿನಡಿ ಅಧಿಕೃತವಾಗಿ ನೇಮಕವಾಗಿರುವ ವ್ಯಕ್ತಿಗಳ ಗಮನಕ್ಕೆ ತರಬಹುದು.– ಕರ್ನಾಟಕ ಲೇವಾದೇವಿದಾರರ ಕಾಯ್ದೆ 1991ರ ಕಾಯ್ದೆಯಡಿ ಪೊಲೀಸ್ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ದಾಳಿ ಹಾಗೂ ಜಪ್ತಿ ಮಾಡುವ ಅಧಿಕಾರವಿಲ್ಲ.– ಈ ಬಗ್ಗೆ ಡಿಜಿಪಿ ಅಗತ್ಯ ಸುತ್ತೋಲೆ ಮತ್ತು ಸೂಚನೆಗಳನ್ನು ಹೊರಡಿಸಬೇಕು. ಆದೇಶ ಪಾಲನೆ ಅಥವಾ ಅನುಸರಣೆ ವರದಿಯನ್ನು ಏ.2 ರಂದು ಪೀಠದ ಮುಂದೆ ಪ್ರಸ್ತುತಪಡಿಸಬೇಕು.– ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಕೊಡಬೇಕು ಎಂದೆನಿಸಿದರೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಬಹುದು.– ಅರ್ಜಿದಾರರ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ದಾಖಲಿಸಿರುವ  ಎಫ್ಐಆರ್ ರದ್ದುಗೊಳಿಸಿ ಅರ್ಜಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿತು.
ಪ್ರಕರಣವೇನು?
2018ರ ಮಾ.16ರಂದು ವಿಲ್ಸನ್‌ಗಾರ್ಡನ್ ನಿವಾಸಿ ಎಲ್.ಯು.ಸತೀಶ್ ವಿರುದ್ಧ ಸಿಸಿಬಿ ಇನ್‌ಸ್ಪೆಕ್ಟರ್ ಉಮಾಶಂಕರ್ ನೀಡಿದ ದೂರಿನ ಅನ್ವಯ ವಿಲ್ಸನ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿತ್ತು.
ಸಿಸಿಬಿ ಇನ್‌ಸ್ಪೆಕ್ಟರ್‌ಗೆ ದಾಳಿ ನಡೆಸುವ ಹಾಗೂ ದಾಖಲಾತಿಗಳನ್ನು ಜಪ್ತಿ ಮಾಡುವ ಅಧಿಕಾರ ಇಲ್ಲ. ಸಹಕಾರ ಸಂಘಗಳ ರಿಜಿಸ್ಟ್ರಾರ್ ಅಥವಾ ಸಹಾಯಕ ರಿಜಿಸ್ಟ್ರಾರ್‌ಗೆ ಮಾತ್ರ ಅಧಿಕಾರವಿದೆ. ಆದ್ದರಿಂದ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ರದ್ದುಗೊಳಿಸುವಂತೆ ಸತೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
