ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದಾಖಲಾಗಿರುವ 97 ಪ್ರಕರಣಗಳ ತನಿಖೆಯನ್ನು ಸಿಸಿಬಿಗೆ ವಹಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನಿರ್ಧರಿಸಿದ್ದಾರೆ.
ಮೊದಲ ಹಂತದಲ್ಲಿ 2009ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ಭೂಗತ ಪಾತಕಿ ರಶೀದ್ ಮಲಬಾರಿ ಪರ ವಕೀಲ ನೌಶಾದ್ ಕೊಲೆ ಪ್ರಕರಣದ ತನಿಖೆಯನ್ನು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಸಿಸಿಬಿಗೆ ವಹಿಸಲಾಗಿದೆ. ಹಂತಹಂತವಾಗಿ ಇನ್ನುಳಿದ ಪ್ರಕರಣಗಳನ್ನು ಸಿಸಿಬಿಗೆ ಹಸ್ತಾಂತರಿಸಲು ಡಿಜಿಪಿ ತೀರ್ವನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರವಿ ಪೂಜಾರಿ ಪತ್ತೆ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂದೀಪ್ ಪಾಟೀಲ್​ಗೆ ಪಾತಕಿಯ ಹಿನ್ನೆಲೆ ಕುರಿತು ಸಮಗ್ರ ಮಾಹಿತಿ ಇದೆ. ಒಂದೇ ಸಂಸ್ಥೆ ತನಿಖೆ ನಡೆಸಿದರೆ ಶೀಘ್ರ ಮುಗಿಯಲಿದೆ. ಪೂಜಾರಿಗೆ ಭದ್ರತೆ ಕಲ್ಪಿಸಲು ಅನುಕೂಲವಾಗಲಿದೆ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ದಾಖಲಾಗಿದ್ದ 47 ಪ್ರಕರಣ ಕುರಿತು ಸಿಸಿಬಿ ತನಿಖೆ ಕೈಗೊಂಡಿದೆ. ಹೀಗಾಗಿ ಮಂಗಳೂರಿನಲ್ಲಿ ದಾಖಲಾಗಿದ್ದ ನೌಶಾದ್ ಕೊಲೆ ತನಿಖೆಯನ್ನು ಸಿಸಿಬಿ ಕೈಗೆತ್ತಿಕೊಂಡಿದೆ. ಹಳೆಯ ಪ್ರಕರಣಗಳಲ್ಲಿ ಆತನ ಕೆಲ ಸಹಚರರು ಶಿಕ್ಷೆಗೆ ಗುರಿಯಾಗಿದ್ದರೆ, ಕೆಲವರು ಸಾಕ್ಷ್ಯಾರ ಕೊರತೆಯಿಂದ ದೋಷಮುಕ್ತರಾಗಿದ್ದಾರೆ. ಬಹುಪಾಲು ಪ್ರಕರಣಗಳ ತನಿಖಾಧಿಕಾರಿಗಳು ಕೂಡ ಬದಲಾಗಿದ್ದಾರೆ. ನಿವೃತ್ತಿ ಸಹ ಹೊಂದಿದ್ದಾರೆ. ಹೀಗಾಗಿ ಮತ್ತೆ ಪೂಜಾರಿ ವಿರುದ್ಧ ತನಿಖೆ ಜವಾಬ್ದಾರಿಯನ್ನು ಸ್ಥಳೀಯ ಪೊಲೀಸರಿಗೆ ವಹಿಸಿದರೆ ಹಾದಿ ತಪ್ಪಬಹುದು ಎಂಬುದು ಸಿಸಿಬಿ ವಹಿಸಲು ಪ್ರಮುಖ ಕಾರಣವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪರಾಧ ಕೃತ್ಯಗಳನ್ನು ಪೂಜಾರಿ ಎಸಗಿದ್ದಾನೆ. ಆತನಿಗೆ ಜೀವ ಬೆದರಿಕೆ ಸಹ ಇದೆ. ಅತಿ ಸೂಕ್ಷ್ಮ ಪ್ರಕರಣಗಳಿದ್ದು, ಪಾತಕನ ಚರಿತ್ರೆ ಶೋಧಿಸಿದರೆ ದೇಶದ ಭದ್ರತೆ ಸಂಬಂಧದ ಮಾಹಿತಿ ತಿಳಿಯಬಹುದು. ಸ್ಥಳೀಯ ಪೊಲೀಸರಿಗೆ ತನಿಖೆ ವಹಿಸಿದರೆ ಆರಂಭದಲ್ಲಿ ಹುಮ್ಮಸ್ಸು ತೋರಿಸಿ ಬಳಿಕ ತನಿಖೆಯಲ್ಲಿ ಲೋಪ ಎಸಗುವ ಸಾಧ್ಯತೆಗಳಿವೆ.
ಇದಲ್ಲದೆ, ರವಿ ಪೂಜಾರಿ ನ್ಯಾಯಾಲಯದಲ್ಲಿ ಜೀವ ಬೆದರಿಕೆ ಇರುವುದಾಗಿ ರಕ್ಷಣೆ ಕೋರಿದ್ದಾನೆ. ತನಿಖೆಗೆ ಕರೆದೊಯ್ಯುವಾಗ ಭದ್ರತೆಗೆ ಬಗ್ಗೆ ನಿಗಾವಹಿಸಬೇಕಿದೆ. ಪ್ರತಿ ಬಾರಿ ಬೇರೆ ಬೇರೆ ತನಿಖಾ ತಂಡಗಳ ಕಸ್ಟಡಿಗೆ ಪಡೆದರೆ ಭದ್ರತೆ ಒದಗಿಸಲು ತೊಂದರೆ ಆಗಬಹುದು. ಅದಕ್ಕಾಗಿ ಒಂದೇ ಸಂಸ್ಥೆಗೆ ತನಿಖೆಗೆ ವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಗತ ಪಾತಕಿ ಭದ್ರತೆಗೆ ಸರ್ಪಗಾವಲು
ಗಣ್ಯರು, ರಾಜಕಾರಣಿಗಳಿಗೆ, ಉದ್ಯಮಿಗಳಿಗೆ ಬೆದರಿಕೆ ಒಡ್ಡಿ ಹಫ್ತಾ ವಸೂಲಿ ಮಾಡುತ್ತಿದ್ದ ರವಿ ಪೂಜಾರಿಗೂ ಜೀವ ಬೆದರಿಕೆ ಇದೆ. ಹಳೆಯ ದ್ವೇಷಕ್ಕೆ ಅಥವಾ ಹೆಸರು ಮಾಡುವ ಉದ್ದೇಶಕ್ಕೆ ರವಿ ಪೂಜಾರಿ ಮೇಲೆ ಎದುರಾಳಿ ತಂಡದವರು ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚಾಗಿದೆ. ಆತನ ಭದ್ರತೆಗಾಗಿ ನಾಲ್ವರು ಇನ್​ಸ್ಪೆಕ್ಟರ್​ಗಳು ಸೇರಿ 30 ಪೊಲೀಸರನ್ನು ನೇಮಿಸಲಾಗಿದೆ.
ಎಲ್ಲೆಲ್ಲಿ, ಯಾರಿಗೆಲ್ಲ ಬೆದರಿಕೆ?
ರವಿ ಪೂಜಾರಿ ವಿರುದ್ಧ ಬೆಂಗಳೂರಿನಲ್ಲಿ 47, ಮಂಗಳೂರು 39, ಮೈಸೂರು, ಉಡುಪಿಯಲ್ಲಿ ಸೇರಿ ಒಟ್ಟು 97 ಪ್ರಕರಣಗಳು ದಾಖಲಾಗಿವೆ. ಸಂಸದ ಡಿ.ಕೆ. ಸುರೇಶ್, ಮಾಜಿ ಶಾಸಕ ವಿನಯ್ ಕುಲಕರ್ಣಿ, ಮಾಜಿ ಸಚಿವ ಯು.ಟಿ. ಖಾದರ್ ಸೇರಿ ಹಲವು ಗಣ್ಯರಿಗೆ ಬೆದರಿಕೆ ಕರೆಗಳು ಮಾಡಿದ್ದ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರ, ಗುಜರಾತ್ ಮತ್ತು ದೆಹಲಿ ಸೇರಿ ಇತರೆ ರಾಜ್ಯಗಳಲ್ಲಿ ಕೂಡ ಪ್ರಕರಣಗಳಿವೆ.
ಕರೊನಾ ನಿಯಂತ್ರಣಕ್ಕೆ ಆಯುರ್ವೇದ ಔಷಧ?: ಕ್ಲಿನಿಕಲ್ ಟ್ರಯಲ್ ಗೆ ಅನುಮತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
