| ರಮೇಶ ಜಹಗೀರದಾರ್ ಚಿತ್ರದುರ್ಗ
ಯಾವುದೇ ಒತ್ತಡಕ್ಕೂ ಮಣಿಯದೆ ಕಾಂತರಾಜ್ ಆಯೋಗದ ವರದಿಯನ್ನು ಅಂಗೀಕರಿಸುವ ಮೂಲಕ ಅವಕಾಶ ವಂಚಿತರಿಗೆ ನ್ಯಾಯ ಒದಗಿಸಬೇಕೆಂದು ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ಆಯೋಜಿಸಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಒಕ್ಕೊರಲಿನ ಒತ್ತಾಯ ಕೇಳಿ ಬಂತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿಯನ್ನು ಸ್ವೀಕಾರ ಮಾಡುವುದಾಗಿ ಘೋಷಿಸಿ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಜಾತಿಗಣತಿ ಅಸ್ತ್ರವನ್ನು ಪ್ರಯೋಗಿಸಿದರು.
ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಸಮೀಪದ ಮೈದಾನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಸಿಎಂ, ವರದಿಯಲ್ಲಿ ವ್ಯತ್ಯಾಸಗಳಿದ್ದರೆ ತಜ್ಞರ ಅಭಿಪ್ರಾಯ ಪಡೆಯಲಾಗುವುದು. ವರದಿಯಲ್ಲಿ ಏನಿದೆ ಎಂಬುದು ತಿಳಿಯದೆ ಅವೈಜ್ಞಾನಿಕವಾಗಿದೆ ಎಂದು ಕೆಲವರು ವಿರೋಧಿಸುತ್ತಿದ್ದಾರೆ. ಅದರಲ್ಲಿರುವ ಅಂಶಗಳ ಬಗ್ಗೆ ಯಾರಿಗೂ ಗೊತ್ತಿಲ್ಲ. ವರದಿ ನೀಡಲು ಶಾಶ್ವತ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗಡೆಗೆ ಕೇಳಿದ್ದೇನೆ ಎಂದರು. ನಾನು ಹಿಂದೆ ಸಿಎಂ ಇದ್ದಾಗ ಕಾಂತರಾಜ್ ಆಯೋಗ ರಚಿಸಿದ್ದೆ. ನನ್ನ ಅವಧಿಯಲ್ಲಿ ಅದು ಪೂರ್ಣವಾಗಿರಲಿಲ್ಲ. ನಂತರ ಆಡಳಿತ ನಡೆಸಿದ ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸ್ವೀಕಾರ ಮಾಡಲಿಲ್ಲ ಎಂದರು. ಒಕ್ಕೂಟದಿಂದ ನೀಡಿರುವ ಎಲ್ಲ ಹಕ್ಕೊತ್ತಾಯಗಳ ಬಗ್ಗೆ ನನಗೆ ಸಹಮತವಿದೆ. ಆದರೆ ನಾನು ಸರ್ವಾಧಿಕಾರಿಯಲ್ಲ, ಸಚಿವ ಸಂಪುಟದಲ್ಲಿ ರ್ಚಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ರಾಜ್ಯಗಳಲ್ಲಿ ಜಾತಿ ಗಣತಿ ಮಾಡಿಸುವುದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಘೊಷಿಸಿದ್ದಾರೆ ಎಂದು ಹೇಳುವ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಇದನ್ನೊಂದು ಅಸ್ತ್ರವಾಗಿ ಬಳಸಿಕೊಳ್ಳುವ ಸೂಚನೆ ನೀಡಿದರು. ಸಮಾವೇಶವು ಹಕ್ಕೊತ್ತಾಯ ಮಂಡನೆಯ ಜತೆಗೆ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯಿತು. ಶೋಷಿತರ ಪರವಾಗಿ ಧ್ವನಿ ಎತ್ತುವ ಜತೆಗೆ ಜಾಗೃತಿಯ ಕಹಳೆ ಮೊಳಗಿಸಲಾಯಿತು. ಸಂಘಟನೆ, ಸಮಾನತೆಯ ಮಂತ್ರ ಜಪಿಸಲಾಯಿತು.
ನಾಡಿನ ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ್ದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಆದಿವಾಸಿಗಳು, ಅಲೆಮಾರಿಗಳು ಒಗ್ಗಟ್ಟಿನ ಸಂದೇಶ ಸಾರಿದರು. ಜನಸಂಖ್ಯೆ ಆಧಾರದಲ್ಲಿ ಅವಕಾಶಗಳು ಸಿಗಬೇಕು. ಈ ನಿಟ್ಟಿನಲ್ಲಿ ಕಾಂತರಾಜ್ ಆಯೋಗದ ವರದಿಯ ಜಾರಿಯೊಂದೇ ಪರಿಹಾರ ಎಂಬ ತೀರ್ವನಕ್ಕೆ ಬರಲಾಯಿತು. ಕಾಂತರಾಜ್ ವರದಿಯು ಒಂದು ಸಮೀಕ್ಷೆ ಮಾತ್ರ. ಅದು ಯಾರ ಪರ ಅಥವಾ ವಿರುದ್ಧವೂ ಅಲ್ಲ. ಜಾತಿಗಣತಿಯ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಸಮಾಜಗಳಿಗೆ ನ್ಯಾಯ ಸಿಗಬೇಕು ಎಂಬ ಗಟ್ಟಿ ಧ್ವನಿ ವ್ಯಕ್ತವಾಯಿತು.
ಕರ್ನಾಟಕ ರತ್ನಕ್ಕೆ ಒತ್ತಾಯಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ದಲಿತ ನಾಯಕರಾದ ಬಿ. ಬಸವಲಿಂಗಪ್ಪ ಮತ್ತು ಪ್ರೊ. ಕೃಷ್ಣಪ್ಪ ಅವರಿಗೆ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದರು. ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಸಮಾವೇಶದ ಹಕ್ಕೊತ್ತಾಯ ಮಂಡಿಸಿದರು.
ಈಕೆ ಒಂದೇ ಒಂದು Instagram ಪೋಸ್ಟ್​ನಿಂದ ಸಂಪಾದಿಸುವ ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
