ಚಿತ್ರದುರ್ಗ:ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಲಾರಿ ಮತ್ತೊಂದು ಲಾರಿಗೆ ಡಿಕ್ಕಿಯಾಗಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ.

ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಕೆಆರ್ ಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಇಚಾರ್ ಲಾರಿ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ. ಈ ರಭಸಕ್ಕೆ ಲಾರಿಯಲ್ಲಿದ್ದ 10 ದನಗಳಲ್ಲಿ 7 ದನಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿವೆ.

ಇದನ್ನೂ ಓದಿ:ಅಯ್ಯೋ ದುರ್ವಿಧಿಯೇ! ತೋಟದಲ್ಲಿ ಕೆಲಸ ಮಾಡುವಾಗ ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು
ಲಾರಿಯಲ್ಲಿದ್ದ ದನಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಎರಡು ಲಾರಿಗಳ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ: 1100 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ, 11 ಮಂದಿ ವಿರುದ್ಧ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
