ಬೆಂಗಳೂರು: ಕಾವೇರಿ ಜಲ ಜ್ವಾಲೆ ಹೆಚ್ಚಳವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಗೆ ನಿಗಿ ನಿಗಿ ಕೆಂಡವಾಗಿರುವ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಹೋರಾಟಕ್ಕೆ ಇಳಿದವು. ವಿಧಾನಸೌಧ ಆವರದ ಗಾಂಧೀಜಿ ಪ್ರತಿಮೆ ಮುಂದೆ ಒಂದೇ ಬ್ಯಾನರ್ ನಡಿ ಉಭಯ ಪಕ್ಷಗಳ ನಾಯಕರು ಬುಧವಾರ ಧರಣಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರ ಮೊಳಗಿಸಿದರು.
ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ರೈತರ ಒಂದು ಬೆಳೆಗೆ ನೀರು ಕೊಡಲಿಲ್ಲ. ತಮಿಳುನಾಡು ನೀರಿಗಾಗಿ‌ ತಂಟೆ ತೆಗೆದು ಸುಪ್ರೀಂ ಕೋರ್ಟ್ ಹೋದಾಗ ರಾಜ್ಯ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಲಿಲ್ಲ.
ಕೋರ್ಟ್ ಆದೇಶಕ್ಕೆ ಮುನ್ನವೇ ಪ್ರತಿದಿನ 10 ಸಾವಿರ ಕ್ಯೂಸೆಕ್ ನಂತೆ 26 ಟಿಎಂಸಿ ಅಡಿಗೂ ಹೆಚ್ಚು ನೀರು ಹರಿಸಿತು. ನಂತರ ಸಮಸ್ಯೆಗೆ ಒಟ್ಟಾಗಿ ಪರಿಹಾರ ಕಂಡುಕೊಳ್ಳೋಣವೆಂದು ಸರ್ವಪಕ್ಷ ಸಭೆ ಕರೆದು, ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ನಿರ್ಧರಿಸಿತು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ನಿಯಂತ್ರಣ ಸಮಿತಿ, ಸುಪ್ರೀಂ ಕೋರ್ಟ್ ನಲ್ಲಿ ಸರಿಯಾಗಿ ವಾದ ಮಂಡಿಸಲಿಲ್ಲ. ಮಿತ್ರಪಕ್ಷ ಡಿಎಂಕೆ ತೃಪ್ತಿಪಡಿಸಲು ಮತ್ತೆ ಮತ್ತೆ ನೀರು ಹರಿಸಿ, ಬೆಂಗಳೂರು ಸೇರಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳು ಕುಡಿಯುವ ನೀರಿಗಾಗಿ ಪರದಾಡುವ‌ ಪರಿಸ್ಥಿತಿ ತಂದಿಟ್ಟಿದೆ ಎಂದು ಧರಣಿ ನಿರತರು ಕಿಡಿಕಾರಿದರು.
ಕಾವೇರಿ ವ್ಯಾಜ್ಯ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ. ಪ್ರಾಧಿಕಾರ, ಸಮಿತಿಗಳ ಸೂಚನೆಯಂತೆ ತಮಿಳುನಾಡಿಗೆ ನೀರು ಹರಿಸಿದೆ. ರಾಜಕೀಯ ಹಿತಾಸಕ್ತಿ ಕಾಪಾಡಲು ರಾಜ್ಯದ ಹಿತ ಬಲಿಕೊಟ್ಟಿದೆ. ಈ ಧೋರಣೆ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಜನರ ಗಮನಸೆಳೆಯಲು ಪ್ರಧಾನಿ ಮದ್ಯೆ ಪ್ರವೇಶಕ್ಕೆ ಕೋರಿ ದ್ವಂದ್ವ ನಿಲುವು ಪ್ರದರ್ಶಿಸಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ವ್ಯಾಜ್ಯ ನ್ಯಾಯಾಂಗದ ಅಂಗಳದಲ್ಲಿರುವಾಗ ಪ್ರಧಾನಿ ಮಧ್ಯೆ ಪ್ರವೇಶ ಅಸಾಧ್ಯ. ಈ ನಡುವೆ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ 18 ದಿನಗಳ ಕಾಲ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶಿಸಿರುವುದನ್ನು ಡಿಸಿಎಂ ಶಿವಕುಮಾರ್ ಸ್ವಾಗತಿಸಿದ್ದಾರೆ. ಐಎನ್ ಡಿಐಎ ಒಕ್ಕೂಟ ಮೆಚ್ಚಿಸಲು ಈ ನಿಲುವು ತಳೆದಿದ್ದು, ಪ್ರಧಾನಿ ಮೋದಿ ಸಾಧ್ಯವಾಗುವುದಾದರೂ ಹೇಗೆ ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ರಾಜಕೀಯ ಆಟ ಕೈಬಿಟ್ಟು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮತ್ತಿತರ ಶಾಸಕರು, ವಿಧಾನ ಪರಿಷತ್ ಸದಸ್ಯರು ಪದಾಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
