ಬೆಂಗಳೂರು:ಕಾವೇರಿ ನೀರಿನ ವಿಚಾರದಲ್ಲಿ ತಮಿಳುನಾಡು ತೆಗೆದಿರುವ ತಗಾದೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಸೋಮವಾರ ಮೊರೆ ಹೋಗಲಿದೆ. ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿ ಸಾಧಕ-ಬಾಧಕ, ರಾಜ್ಯದ ಮನವಿ ಸ್ವರೂಪದ ಕುರಿತು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆ ಸುದೀರ್ಘವಾಗಿ ಚರ್ಚಿಸಿತು.ಅಡ್ವೋಕೇಟ್ ಜನರಲ್ ಅವರನ್ನು ಸಚಿವ ಸಂಪುಟ ಸಭೆಗೆ ಕರೆಯಿಸಿಕೊಂಡು ಮುಂದಿನ ಕಾನೂನು ಹೋರಾಟ, ರಾಜ್ಯ ಸರ್ಕಾರದ ನಡೆ ಹೇಗಿರಬೇಕೆಂದು ಸಮಾಲೋಚಿಸಿತು.ಮುಂಗಾರು ರಾಜ್ಯಕ್ಕೆ ತಡವಾಗಿ ಪ್ರವೇಶಿಸಿತು. ನಂತರವೂ ಸಮರ್ಪವಾಗಿ ಮಳೆ ಸುರಿಯದ ಕಾರಣ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಕೊರತೆಯಾಗಿದೆ. ರೈತರ ವಿಷಯದಲ್ಲಿ ಕರ್ನಾಟಕ ಅಥವಾ ತಮಿಳುನಾಡು ಎಂಬ ತಾರತಮ್ಯವಿಲ್ಲ. ಭರಪೂರ ಮಳೆ ಸುರಿದಿದ್ದರೆ ಜಲಾಶಯಗಳು ಭರ್ತಿಯಾಗಿ ನದಿಪಾತ್ರಕ್ಕೆ ನೀರು ಹರಿಯುತ್ತಿತ್ತು.ಹಂಚಿಕೆ ಮತ್ತು ಸಂಕಷ್ಟವನ್ನು ಸಮನಾಗಿ ಹಂಚಿಕೊಳ್ಳಲು ರಾಜ್ಯ ಬಯಸುತ್ತದೆ. ನಿರೀಕ್ಷೆಯಂತೆ ನೀರಿನ ಲಭ್ಯತೆಯಿದ್ದಿದ್ದರೆ ನೀರು ಹಂಚಿಕೆ ಸೂತ್ರ ಪಾಲನೆಗೆ ಕಷ್ಟವೇ ಆಗುತ್ತಿದ್ದಿಲ್ಲ ಎಂದು ಸುಪ್ರೀಂಗೆ ರಾಜ್ಯ ಸರ್ಕಾರ ನಿವೇದಿಸಿಕೊಳ್ಳಲಿದೆ.
ಹೋರಾಟ ಬೇಡ
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಸೋಮವಾರ ಮನವಿ ಸಲ್ಲಿಸಲಿದ್ದಾರೆ ಎಂದು ಖಚಿತಪಡಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸರ್ವಪಕ್ಷಗಳ ಸಭೆ ಕರೆಯುವ ಇಂಗಿತ ವ್ಯಕ್ತಪಡಿಸಿದ್ದು, ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗಳು ಪ್ರತಿಭಟನೆ ಮಾಡುವುದು ಬೇಡವೆಂದು ವಿನಂತಿಸಿದರು.ತಮಿಳುನಾಡಿಗೆ ಕಾವೇರಿ ಬಿಟ್ಟಿರುವುದನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಸೋಮವಾರ ಮಂಡ್ಯ ಜಿಲ್ಲೆ ಬಂದ್‌ಗೆ ಕರೆ ಕೊಟ್ಟಿದ್ದರತ್ತ ಗಮನಸೆಳೆದಾಗ ಉತ್ತರಿಸಿದ ಅವರು, ಸರ್ವಪಕ್ಷ ಸಭೆಯನ್ನು ಸಿಎಂ ಆದಷ್ಟು ಬೇಗನೆ ಕರೆಯಲಿದ್ದು, ಬಂದ್ ಚಳವಳಿ ಕೈಬಿಡಬೇಕೆಂಬ ವಿನಂತಿ ಪುನರುಚ್ಚರಿಸಿದರು.ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀರಿಲ್ಲವೆಂದು ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದು, ನಂತರ ತಮಿಳುನಾಡಿಗೆ ನೀರು ಹರಿಸಿರುವುದು ದ್ವಂದ್ವ ನಿಲುವು ಅಲ್ಲವೆ ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ಎಚ್.ಕೆ.ಪಾಟೀಲ್ ನಿರಾಕರಿಸಿ, ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಿರುವ ಮುನ್ನ ಯಾವುದೇ ಟಿಪ್ಪಣಿ ನೀಡುವುದು ಸರಿಯಲ್ಲವೆಂಬ ಸಮಜಾಯಿಷಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
