ಮೈಸೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇಂದು ಮೈಸೂರು ಪ್ರವಾಸದಲ್ಲಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ಹೇಳಿದರು. ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು ಎಂದು ಹೇಳಿದರು.
ಇನ್ನು ಈ ವಿವಾದವನ್ನು ಕಾನೂನಾತ್ಮಕವಾಗಿ ಎದುರಿಸಲು ಇರುವ ತಂಡದ ಕುರಿತು ಮಾತನಾಡಿರುವ ಸಿಎಂ, ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನು ತಂಡವೇ ಈಗಲೂ ಇದ್ದು, ಅದು ಎಲ್ಲ ಪಕ್ಷಗಳ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ ಎಂದಿದ್ದಾರೆ.
ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ದೇವೇಗೌಡರು, ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು ಎಂದರು.
ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕರಿಗೆ ತೊಂದರೆ ಆಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು, ಈಗ ಚಡ್ಡಿ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ನೆಲ, ಜಲ, ಭಾಷೆಯ ವಿಷಯವನ್ನು ರಾಜಕಾರಣ ಮಾಡಬಾರದು ಎಂದು ಸಿಎಂ ಹೇಳಿದರು.
ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳು ಮಧ್ಯೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
