ಬೆಂಗಳೂರು:‘ಕಾವೇರಿ ನೀರು ನಿಯಂತ್ರಣ ಸಮಿತಿ’ಯ ನಿರ್ದೇಶನದಂತೆ ನೀರು ಬಿಟ್ಟಿದ್ದೇವೆ ಎಂದು ಬೇಜವಾಬ್ದಾರಿಯಿಂದ ಹೇಳುತ್ತಿರುವ ಕರ್ನಾಟಕ ರಾಜ್ಯ ಸರ್ಕಾರ ಕನ್ನಡಿಗರ ಹಿತವನ್ನೇ ಬಲಿಕೊಟ್ಟಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಕ್ಷ ಡಾ.ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.
ಶಾಸಕರ ಭವನದಲ್ಲಿ ರೈತಪರ ಸಂಘಟನೆಗಳು, ಕನ್ನಡ ಪರ ಹೋರಾಟ ಸಂಘಗಳು, ನಾಡಿನ ನೀರಾವರಿ ತಜ್ಞರು, ಸಾಹಿತಿಗಳು ಹಾಗೂ ಚಿಂತಕರನ್ನೊಳಗೊಂಡ ‘ನಮ್ಮ ಜಲ ನಮ್ಮದು – ಬನ್ನಿ ಮಾತಾಡೋಣ’ ವಿಶೇಷ ದುಂಡುಮೇಜಿನ ಸಭೆ ಉದ್ದೇಶಿಸಿ ಮಾತನಾಡಿದರು.ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿದರು.
ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ತಕ್ಷಣ, ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಕೈಗೊಂಡ ಕರ್ನಾಟಕ ಸರ್ಕಾರದ ಧೋರಣೆ ಒಪ್ಪುವಂಥದ್ದಲ್ಲ. ಸರ್ಕಾರ ಪ್ರತಿಯಾಗಿ ಕೂಡಲೇ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಬೇಕಿತ್ತು. ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು, ರಾಜಕೀಯ ಲಾಭಕ್ಕಾಗಿ ಕನ್ನಡಿಗರ ಹಿತ ಬಲಿಕೊಟ್ಟಿರುವುದು ಸರಿಯಲ್ಲ. ಕರ್ನಾಟಕಕ್ಕೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಮೂರು ಪಕ್ಷಗಳು ತಮ್ಮ ಸ್ವಾರ್ಥ ಸಾಧನೆಗೆ ಕನ್ನಡಿಗರ ಹಿತವನ್ನು ಬಲಿಕೊಟ್ಟಿವೆ. ಕಾಣದಂತೆ ನೀರು ಹರಿಸಿರುವುದಕ್ಕೆ ಸಾಕಷ್ಟು ನಿದರ್ಶನಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಮೇಲೆ ಚಪ್ಪಡಿ ಎಳೆಯುವ ಕೆಲಸಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ನಿರಂತರವಾಗಿ ಕಾವೇರಿ ವಿಚಾರದಲ್ಲಿ ಹೋರಾಟ ಮಾಡಿದರೂ ನಮಗೆ ಸರಿಯಾದ ನ್ಯಾಯ ಸಿಕ್ಕಿಲ್ಲ. ನಮ್ಮ ಜಲಾಶಯಗಳಿಗೆ ಬಂದಂತಹ ನೀರನ್ನು ಏಕಾಏಕಿ ಬಿಟ್ಟು, ನಮ್ಮ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು-ರಾಜ್ಯದ ಕಾವೇರಿ ಜಲಾಶಯದಲ್ಲಿ ಈಗಾಗಲೇ ತಮಿಳುನಾಡಿಗೆ ನೀರು ಹರಿಸಿ ರೈತರಿಗೆ ದ್ರೋಹ ಬಗೆದಿರುವ ಸರ್ಕಾರದ ವರ್ತನೆಗೆ ಖಂಡನೆ.-ಕಾವೇರಿ ನೀರಿನ ನಿರ್ವಹಣಾ ಮಂಡಳಿ ಆದೇಶಿಸಿರುವ 5000 ಕ್ಯೂಸೆಕ್ಸ್ ನೀರನ್ನು ಯಾವುದೇ ಕಾರಣಕ್ಕೂ ಬಿಡಬಾರದು.-ಕದ್ದು ಮುಚ್ಚಿ ನೀರು ಬಿಡಲು ಹೊರಟರೆ ರಸ್ತೆಗಿಳಿದು ಪ್ರತಿಭಟನೆ ನಡೆಸಲು ಸಮಿತಿ ತೀರ್ಮಾನಿಸಿ ರೈತರಿಗೆ ಕರೆ.-ಮೇಕೆದಾಟು ಜಲಾಶಯ ನಿರ್ಮಾಣ ಕೂಡಲೇ ಕೈಗೆತ್ತಿಕೊಳ್ಳಬೇಕು.-ಸಮುದ್ರಕ್ಕೆ ಹೆಚ್ಚುವರಿ ನೀರನ್ನು ಸಂಗ್ರಹಿಸಿಕೊಂಡು ಸಂಕಷ್ಟ ಸಮಯದಲ್ಲಿ ಕುಡಿಯುವ ನೀರಿಗೆ ಬಳಸಬೇಕು.-ಬೆಂಗಳೂರಿಗೆ ಸುಪ್ರೀಂ ಕೋರ್ಟ್ ನಿಗದಿ ಮಾಡಿರುವ ಕುಡಿಯುವ ನೀರಿನ ಪ್ರಮಾಣವನ್ನು ಜನಸಂಖ್ಯೆ ಏರಿಕೆಯಾಗಿರುವ ಕಾರಣ 30 ಟಿಎಂಸಿ ನಿಗದಿಪಡಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಬೇಡಿಕೆ ಇಡಬೇಕು.-ಮಳೆ ಕಡಿಮೆ ಬಂದ ವರ್ಷ ನೀರು ಬಿಡುವ ಪ್ರಮಾಣ ಸಂಕಷ್ಟ ಸೂತ್ರ ಕೇಂದ್ರ ಸರ್ಕಾರ ತಕ್ಷಣವೇ ಜಾರಿ ಮಾಡಬೇಕು.-ಕಾವೇರಿ ಪ್ರಾಧಿಕಾರ ಸ್ವಾಯತ್ತತೆ ಪ್ರಾಧಿಕಾರವನ್ನು ರಚಿಸಬೇಕು. ಅದರ ಮುಖೇನ ತೀರ್ಮಾನವಾಗಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
