ಮೈಸೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ಹಿಂದೆ CWRC ನೀಡಿದ ಆದೇಶವನ್ನೇ ಮತ್ತೊಮ್ಮೆ ಎತ್ತಿ ಹಿಡಿಯಲಾಗಿದೆ.
ಈ ಕುರಿತು ಪ್ರತಿಕ್ರಿಯಸಿರುವ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ. ಶಿವಕುಮಾರ್​ ನಾವು ನೀರು ಬಿಡುವ ವಿಚಾರವಾಗಿ ಇನ್ನೂ ತೀರ್ಮಾನ ಮಾಡಿಲ್ಲ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಆ ನಂತರ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ಧಾರೆ.
ಇವತ್ತಿನ ಆದೇಶದ ಪ್ರಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನೀರನ್ನು ಹರಿಸುವಂತೆ ಆದೇಶಿಸಲಾಗಿದೆ. ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ನಾವು ಸುಪ್ರೀಂ ಕೋರ್ಟ್​ನಿಂದ ಬೈಗುಳ ಕೇಳಲು ಸಿದ್ದವಿಲ್ಲ. ಕಾನೂನು ತಜ್ಞರ ಬಳಿ ನಾನು ಎಲ್ಲಾ ಮಾಹಿತಿ ಪಡೆದಿದ್ದೇನೆ ಶುಕ್ರವಾರ ಈ ವಿಚಾರವಾಗಿ ಸುಪ್ರೀಂ ಕೋರ್ಟ್​ನಲ್ಲಿ ಕಲಾಪ ಇದೆ.
ಇದನ್ನೂ ಓದಿ:ಇನ್ನು ಮುಂದೆ ವಿಮಾನದಲ್ಲೂ ಪ್ರಾರಂಭವಾಗಲಿದೆ “ವಯಸ್ಕರಿಗೆ ಮಾತ್ರ” ವಿಭಾಗ; ಇದರ ವಿಶೇಷತೆಗಳೇನು?
ನಮ್ಮ ವಕೀಲರು ಪ್ರಬಲವಾಗಿ ವಾದ ಮಂಡಿಸಿದ್ದಾರೆ. ತಮಿಳುನಾಡಿನವರು 24 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಆಗ್ರಹಿಸಿದ್ದರು. ಆದರೆ, ನಮ್ಮ ವಕೀಲರು ಅದನ್ನು ಐದು ಸಾವಿರ ಕ್ಯೂಸೆಕ್​ಗೆ ಇಳಿಸಿದ್ದಾರೆ. ಆದರೆ, ನಾವು ಇನ್ನೂ ನೀರು ಬಿಡುವ ತೀರ್ಮಾನಕ್ಕೆ ಬಂದಿಲ್ಲ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಆ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ತಮಿಳುನಾಡಿದ ಕಾವೇರಿ ನೀರು ಹರಿಸುವ ವಿಚಾರ ಕೇಂದ್ರ ಸರ್ಕಾರದ ಬಳಿ ಒಂದು ಕೀಲಿ ಕೈ ಇದೇ. ರಾಜ್ಯ ಬಿಜೆಪಿಯವರು ನಮ್ಮನ್ನು ಕಟ್ಟಿಹಾಕಲು ಯತ್ನಿಸುತ್ತಿದ್ದಾರೆ. ಅವರು ಪ್ರತಿಯೊಂದು ವಿಚಾರದಲ್ಲೂ ರಾಜಕೀಯ ಮಾಡಬೇಕೆಂದು ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಜನತೆಗೆ ವಾಸ್ತವ ಸ್ಥಿತಿ ತಿಳಿದಿದೆ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 2 =
Remember me
