ಬೆಂಗಳೂರು:ಐ ಮಾನಿಟರಿ ಅಡ್ವೈಸರಿ (ಐಎಂಎ) ಬಹುಕೋಟಿ ರೂ. ವಂಚನೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಹಾಗೂ ಇತರ ಪೊಲೀಸ್ ಸಿಬ್ಬಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಸರ್ಕಾರ ಅನುಮತಿ ನೀಡಿದೆ.
ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ, ಸಿಐಡಿ ಡಿವೈಎಸ್‌ಪಿ ಆಗಿದ್ದ ಇ.ಬಿ.ಶ್ರೀಧರ್, ಕಮರ್ಷಿಯಲ್ಸ್ಟ್ರೀಟ್ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಎಂ.ರಮೇಶ್, ಸಬ್ ಇನ್ಸ್‌ಪೆಕ್ಟರ್ ಪಿ. ಗೌರಿಶಂಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ. ಕೆಲ ದಿನಗಳಲ್ಲೇ ಇವರ ವಿರುದ್ಧ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಿದ್ದಾರೆ.ಇದನ್ನೂ ಓದಿ:‘ಮೊಘಲ್​ ಮ್ಯೂಸಿಯಂ’ ಹೆಸರನ್ನು ‘ಛತ್ರಪತಿ ಶಿವಾಜಿ ಮ್ಯೂಸಿಯಂ’ ಎಂದು ಬದಲಿಸಿದ ಯೋಗಿ ಆದಿತ್ಯನಾಥ್​
ಇದೀಗ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ಹಾಗೂ ಇತರ ಪೊಲೀಸ್ ಸಿಬ್ಬಂದಿಗೆ ಸಿಬಿಐ ಭೀತಿ ಎದುರಾಗಿದ್ದು, ಅಪರಾಧ ಸಾಬೀತಾದರೆ ಇಬ್ಬರಿಗೂ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಲಿದೆ. ಮುಂದೆ ಇವರು ಕೋರ್ಟ್‌ನಲ್ಲೇ ಕಾನೂನು ಹೋರಾಟ ನಡೆಸಬೇಕಿದೆ. ಆರೋಪಿಗಳು ಲಂಚ ಪಡೆದು ಐಎಂಎ ಪರ ವರದಿ ನೀಡಿರುವ ಸಂಬಂಧ ಸಿಬಿಐ ಮಹತ್ವದ ಸಾಕ್ಷ್ಯ ಕಲೆ ಹಾಕಿದ್ದು, ಚಾರ್ಜ್‌ಶೀಟ್‌ನಲ್ಲಿ ಈ ಬಗ್ಗೆ ಎಳೆಎಳೆಯಾಗಿ ಉಲ್ಲೇಖಿಸಲು ಮುಂದಾಗಿದೆ.
ಬೆಂಗಳೂರಿನಲ್ಲಿ ಆಂಬ್ಯುಲೆನ್ಸ್​ ಹತ್ತಿದ ಕರೊನಾ ಸೋಂಕಿತೆ ದೆಹಲಿಯಲ್ಲಿ! ಅಸಲಿಯತ್ತೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
