ಬೆಂಗಳೂರು:ಬ್ಯಾಂಕ್​ವೊಂದಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ  ವಿರುದ್ಧ ಕೇಂದ್ರೀಯ ತನಿಖಾ ದಳ ಎಫ್‍ಐಆರ್ ದಾಖಲಿಸಿದೆ.
ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಶಿವರಾಮೇ ಗೌಡರು ಲೋನ್ ಪಡೆದಿದ್ದರು. ಇದೀಗ ಈ ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಕುರಿತು ಬ್ಯಾಂಕ್ ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ದೂರು ಸಲ್ಲಿಸಿದ್ದರು.
ನಕಲಿ ದಾಖಲೆ ಸೃಷ್ಟಿಸಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​​ನಿಂದ 12.48 ಕೋಟಿ ರೂಪಾಯಿ ಸಾಲ ಪಡೆದು ವಂಚಿಸಿರುವ ಆರೋಪದ ಮೇಲೆ  ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿದೆ.
ಆರೋಪಿಗಳು ಒಳಸಂಚು ರೂಪಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಿಂದ ಸಾಲ ಪಡೆದಿದ್ದಾರೆ. ಸಾಲದ ಹಣವನ್ನು ಬೇರೆ ಬ್ಯಾಂಕ್ ಖಾತೆಗಳಿವೆ ವರ್ಗಾವಣೆ ಮಾಡಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿದ್ದಾರೆ. ನಂತರ ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂದು ಎಸ್​.ಡಿ.ಮೋದಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 1 =
Remember me
