ಬೆಂಗಳೂರು:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದಿರುವ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಜಿ ಅಭಿಪ್ರಾಯ ತೆಗೆದುಕೊಂಡಿದ್ದೇವೆ. ಇಡಿಯೇ ಸಿಬಿಐ ತನಿಖೆಗೆ ಕೊಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿತ್ತು. ನಾವು ಕಾನೂನು ರೀತಿಯಾಗಿಯೇ ಮಾಡಿದ್ದೆವು. ಈಗ ಅದನ್ನು ತಿರುಚಿದ್ದಾರೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು.
ಆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಎಜಿಗೆ ವರದಿ ಕೊಡುವಂತೆ ಯಡಿಯೂರಪ್ಪ ಕೇಳಿದ್ದು ಹೌದು. ಆದರೆ ವರದಿ ಏನೆಂದು ಕೊಟ್ಟರು ಎಂಬುದನ್ನು ಹೇಳಬೇಕು ಎಂದು ಸವಾಲು ಹಾಕಿದರು.
ಎಲ್ಲ ದಾಖಲೆಗಳನ್ನು ಅವರು ಸದನದಲ್ಲಿ ಕೊಡಲಿ. ಇಲ್ಲದಿದ್ದರೆ ನಾನು ದಾಖಲೆ ಕೊಡುತ್ತೇನೆ. ನಮಗೂ ರಾಜಕಾರಣ ಮಾಡಲು ಬರುತ್ತದೆ ಎಂದು ಟಾಂಗ್ ಕೊಟ್ಟರು. ಈ ಪ್ರಕರಣದಲ್ಲಿ ಅವಸರದ ತಿರ್ಮಾನ ಯಾಕೆ ಕೈಗೊಂಡರು? ಇಂತಹ ಎಷ್ಟು ಪ್ರಕರಣಗಳನ್ನು ತನಿಖೆಗೆ ಕೊಡಲಾಗಿದೆ? ಎಲ್ಲ ವಿವರ ಕೊಡಲಿ ಎಂದು ಕೇಳಿದರು.
ಸ್ಥಳಿಯ ತನಿಖಾ ಸಂಸ್ಥೆಗಳು ತನಿಖೆ ಮಾಡಲು ವಿಫಲ ಆದಾಗ ಮಾತ್ರ ಸಿಬಿಐ ತನಿಖೆ ಮಾಡಬೇಕು. ಆದರೆ ಯಾಕೆ ಹಿಂದಿನ ಸರ್ಕಾರ ಅವಸರ ಮಾಡಿತು? ಒಂದೇ ದಿನದಲ್ಲಿ ಸಿಬಿಐ ತನಿಖೆಗೆ ಯಡಿಯೂರಪ್ಪ ಆದೇಶ ಮಾಡಿದ್ದು ಏಕೆ ಎಂದು ಪ್ರಶ್ನಿಸಿದರು.
ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಾಗ ಎಲ್ಲ ಸಾಧಕ-ಬಾಧಕ ಚರ್ಚೆ ಮಾಡುತ್ತೇವೆ. ಸಾರ್ವಜನಿಕ ಅಭಿಪ್ರಾಯ, ಮಾಧ್ಯಮ, ಕಾನೂನು ಸಮಸ್ಯೆ ಕುರಿತು ಚರ್ಚೆ ಮಾಡುತ್ತೇವೆ ಎಂದರು. ಸಂಪುಟ ಸಭೆ ಮುಗಿದ ಬಳಿಕ 35 ನಿಮಿಷಗಳ ಕಾಲ ಚರ್ಚೆ ಮಾಡಿದ್ದು ಬೇರೆ ವಿಚಾರಕ್ಕೆ.ಬರಗಾಲ ಮತ್ತು ಜನತಾ ದರ್ಶನ ಕುರಿತು ಚರ್ಚೆ ಮಾಡಿದ್ದೇವೆ. ಸಂಪುಟ ಸಭೆಯ ನಿರ್ಣಯ ಹಿತಶತ್ರುಗಳ ನಿರ್ಧಾರ ಅಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − three =
Remember me
