ಬೆಂಗಳೂರು : ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಎಸಿಪಿ ಮುದವಿ ಮತ್ತು ಮುಖ್ಯ ಪೇದೆ ಮಲ್ಲಿಕಾರ್ಜುನ್​ ಎಂಬುವರನ್ನು ಸೇವೆಯಿಂದ ಅಮಾನತು ಮಾಡಿ ಪೊಲೀಸ್ ಇಲಾಖೆ ಆದೇಶಿಸಿದೆ.
ಡ್ರಗ್ಸ್ ಕೇಸಿನಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವಿರೇನ್ ಖನ್ನಾ ಸೇರಿದಂತೆ 14ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದ ಸಮಯದಲ್ಲಿಯೇ ಬಂಧಿತ ಆರೋಪಿ ವಿರೇನ್ ಖನ್ನಾಗೆ ಮೊಬೈಲ್ ಕೊಟ್ಟು ತನಿಖೆಗೆ ಅಡ್ಡಿ ಉಂಟು ಮಾಡಿದ್ದ ಆರೋಪ ಎಸಿಪಿ ಮುದವಿ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ, ವಿರೇನ್ ಖನ್ನಾಗೆ ಕೇಸ್‌ನಲ್ಲಿ ತಪ್ಪಿಸಲು ಸಹಕಾರ ನೀಡುವುದಾಗಿ ಭರವಸೆ ಕೊಟ್ಟು 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಂಟಿ ಪೊಲೀಸ್ ಆಯುಕ್ತ(ಅಪರಾಧ) ಸಂದೀಪ್ ಪಾಟೀಲ್, ಈ ಕುರಿತು ಮೇಲಾಧಿಕಾರಿಗಳಿಗೆ ವರದಿ ನೀಡಿದ್ದರು.
ವರದಿಯನ್ನು ಪರಿಶೀಲನೆ ನಡೆಸಿದ ಪೊಲೀಸ್ ಕಮಿಷನರ್ ಕಮಲ್ ಪಂತ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀನ್ ಸೂದ್ ಮತ್ತು ಗೃಹ ಇಲಾಖೆಗೆ ವರದಿ ಸಲ್ಲಿಸಿದ್ದರು. ಈ ಮೇರೆಗೆ ಪೊಲೀಸ್ ಇಲಾಖೆಗೆ ಬುಧವಾರ ಎಸಿಪಿ ಮುದವಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ. ಹಿರಿಯ ಎಸಿಪಿ ಆಗಿದ್ದು, ಇನ್ನೂ ನಿವೃತ್ತಿಗೆ 2 ವರ್ಷ ಮಾತ್ರ ಬಾಕಿ ಇತ್ತು. ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸಿನಲ್ಲಿ ಪೊಲೀಸ್ ಅಧಿಕಾರಿಗಳು ಕೈ ಜೋಡಿಸಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಮೊದಲ ವಿಕೇಟ್ ಆಗಿ ಮುದವಿ ಅಮಾನತು ಆಗಿದ್ದು, ಮತ್ತಷ್ಟು ಮಂದಿಗೆ ಕಂಟಕವಾಗುವ ಸಾಧ್ಯತೆ ಇದೆ.
ಡ್ರಗ್ಸ್​ ಕೇಸ್​; 25ರಂದು ವಿಚಾರಣೆಗೆ ಹಾಜರಾಗಲು ದೀಪಿಕಾಗೆ ಎನ್​ಸಿಬಿ ಸಮನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seventeen =
Remember me
