ಬೆಂಗಳೂರು:ನಾಳೆ (ಜ.24) ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಚಪ್ಪ ಹಾಗೂ ಚಂದ್ರು ಎಂಬವರು ಸೇರಿ ನಾಲ್ವರನ್ನು ಬಂಧಿಸಿರುವ ಪೊಲೀಸರು, ಅವರ ಬಳಿ ಇದ್ದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಆರೋಪಿಗಳ ಬಳಿ ಇದ್ದ 24 ಲಕ್ಷ ರೂಪಾಯಿ ಮತ್ತು 3 ವಾಹನಗಳನ್ನೂ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳದಲ್ಲಿ‌ ಆರೋಪಿಗಳ ಬಂಧಿಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಮಾಹಿತಿಯನ್ನು ಪೊಲೀಸರು ಕೆಪಿಎಸ್​ಸಿಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳು ಹಾಗೂ ಬಂಧಿತರೊಂದಿಗೆ ವ್ಯವಹರಿಸಿದ್ದ ಅಭ್ಯರ್ಥಿಗಳ ಪತ್ತೆಗೂ ಮುಂದಾಗಿರುವ ಪೊಲೀಸರು, ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
2020ರ ಜನವರಿ 31ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ನಾಳೆ ಅಂದರೆ 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ ಪರೀಕ್ಷೆಗೂ ಮುನ್ನಾದಿನ ಅಂದ್ರೆ ಶನಿವಾರವೇ ಭಾನುವಾರ ಎರಡು ಅಧಿವೇಶನಗಳಲ್ಲಿ ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾದ್ದರಿಂದ ಪರೀಕ್ಷೆಯನ್ನು ಆಯೋಗವು ಮುಂದೂಡಿದೆ.
ಎಫ್​ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
