ಬೆಂಗಳೂರು :ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರ ರಾಜಕೀಯ ದ್ವೇಷವೇ ಮೂಲ ಕಾರಣವೆಂದು ಸಿಸಿಬಿ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ಮಾಜಿ ಮೇಯರ್ ವಿರುದ್ಧ ಪ್ರತ್ಯೇಕ ಆರೋಪ ಪಟ್ಟಿ ?
ಶಾಸಕರ ಮನೆಗೆ ಬೆಂಕಿ ಹಾಕಿದ ಕೃತ್ಯದಲ್ಲಿ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿಯನ್ನು ಸಲ್ಲಿಸಿ ಸಿಸಿಬಿ ತನಿಖೆ ಮುಂದುವರೆಸಿದೆ. ಕೃತ್ಯದಲ್ಲಿ ಮಾಜಿ ಮೇಯರ್ ಪಾತ್ರವನ್ನು ಮಾತ್ರವಷ್ಟೇ ಉಲ್ಲೇಖಿಸಿದೆ. ಮುಂದಿನ ತನಿಖೆಯಲ್ಲಿ ಮಾಜಿ ಮೇಯರ್ ಪಾತ್ರದ ವಿಸ್ತಾರ ರೂಪದ ಬಗ್ಗೆ ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಲು ಸಿಸಿಬಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಗಲಭೆ ದಿನ ಶಾಸಕರ ಮನೆ ಮತ್ತು ಕಚೇರಿಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್, ಅವರ ಆಪ್ತ ಸಹಾಯಕ ಅರುಣ್, ಕಾರು ಚಾಲಕ ಸಂತೋಷ್, ಮಾಜಿ ಕಾಪೋರೇಟರ್ ಅಬ್ದುಲ್ ರಾಕೀಬ್ ಜಾಕೀರ್ ಹಾಗೂ ಮಜ್ನು ಸೇರಿದಂತೆ 60 ಆರೋಪಿಗಳ ವಿರುದ್ಧ ಸಿಸಿಬಿ 33ನೇ ಎಸಿಎಂಎಂ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ವೇಳೆ ಶಾಸಕರ ಮನೆಗೆ ಬೆಂಕಿ ಹಾಕಲು ಉದ್ರಿಕ್ತರ ಗುಂಪನ್ನು ಕಾಂಗ್ರೆಸ್ ಮುಖಂಡರು ಪ್ರಚೋಧಿಸಿದ್ದರು ಎಂದು ಸಿಸಿಬಿ ಉಲ್ಲೇಖಿಸಿದೆ ಎನ್ನಲಾಗಿದೆ.
ಇದನ್ನೂ ಓದಿ:ಹಾಲಿನ ವ್ಯಾನಲ್ಲಿ ಗೋಮಾಂಸ ಸಾಗಾಟ: ಪತ್ತೆ ಮಾಡಿದ್ರು ಬಜರಂಗ ದಳದ ಕಾರ್ಯಕರ್ತರು
ಆ.11ರಂದು ಫೇಸ್​ಬುಕ್​ನಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೋದರ ಸಂಬಂಧಿ ನವೀನ್ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಎಂಬ ಕಾರಣಕ್ಕೆ ಗಲಭೆ ನಡೆದಿತ್ತು. ಪೋಸ್ಟರ್ ವಿರೋಧಿಸಿ ಕಾವಲ್​ಭೈರಸಂದ್ರದಲ್ಲಿರುವ ನವೀನ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಶಾಸಕರ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿದ್ದ ಮಾಜಿ ಮೇಯರ್ ಹಾಗೂ ಮಾಜಿ ಕಾಪೋರೇಟರ್ ಇದನ್ನೇ ಲಾಭ ಪಡೆದು ಸಂಚು ರೂಪಿಸಿದ್ದರು. ನವೀನ್ ಮನೆ ಮುಂದೆ ಗಲಾಟೆ ಮಾಡುತ್ತಿದ್ದ ಗುಂಪಿಗೆ ಪ್ರಚೋಧಿಸಿ ನವೀನ್ ಮನೆ ಹತ್ತಿರದಲ್ಲೇ ಇದ್ದ ಶಾಸಕರ ಮನೆ ಮತ್ತು ಕಚೇರಿಗೆ ಮೇಲೆ ದಾಳಿಗೆ ಉದ್ರಿಕ್ತರ ಗುಂಪನ್ನು ಕಳುಹಿಸಿದ್ದರು. ಈ ಕೃತ್ಯದಲ್ಲಿ ಸಂಪತ್ ರಾಜ್ ಸೂಚನೆ ಮೇರೆಗೆ ಆಪ್ತ ಸಹಾಯಕ ಅರುಣ್ ಹಾಗೂ ಕಾರು ಚಾಲಕ ಸಂತೋಷ್, ಜಾಕೀರ್ ಶಿಷ್ಯ ಮಜ್ನು ಮೂಲಕ ಸಂಚನ್ನು ಕಾರ್ಯರೂಪಕ್ಕಿಳಿಸಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಗ್ಲಾಸ್​, ಸ್ಮಾರ್ಟ್​ಫೋನ್​ಗಳ ಮೇಲೆ 28 ದಿನ ಜೀವಂತ ಇರುತ್ತೆ ಕರೊನಾ ವೈರಸ್!
72 ಎಫ್​ಐಆರ್, 421 ಆರೋಪಿಗಳ ಸೆರೆ
ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಸಂಬಂಧ 2 ಠಾಣೆಗಳಲ್ಲಿ 72 ಎಫ್​ಐಆರ್​ಗಳು ದಾಖಲಾಗಿದ್ದು, 421 ಆರೋಪಿಗಳು ಬಂಧಿಸಿದ್ದಾರೆ. ಪೊಲೀಸರ ಗೋಲಿಬಾರ್ ಸಂಬಂಧ 2 ಎಫ್​ಐಆರ್​ಗಳು ದಾಖಲಾಗಿದ್ದು, ಎನ್​ಐಎ ತನಿಖೆ ನಡೆಸುತ್ತಿದೆ. ಶಾಸಕರ ಮನೆ ಮತ್ತು ಕಚೇರಿ ಮೇಲಿನ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನುಳಿದ ಕೃತ್ಯಗಳ ಬಗ್ಗೆ ಪೂರ್ವ ವಿಭಾಗದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:ನನ್ನನ್ನು ಕ್ಷಮಿಸಿಬಿಡಿ… ಕಣ್ಣೀರು ಸುರಿಸಿದ ಉ.ಕೊರಿಯಾ ಸರ್ವಾಧಿಕಾರಿ ಕಿಮ್​!
400 ಪುಟ, 60 ಆರೋಪಿಗಳು
ಶಾಸಕರ ಮನೆ ಮತ್ತು ಕಚೇರಿಗೆ ಬೆಂಕಿ ಹಾಕಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 400 ಪುಟಗಳ ಆರೋಪಪಟ್ಟಿಯನ್ನು ಕೋರ್ಟ್​ಗೆ ಸಲ್ಲಿಸಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಆಪ್ತ ಸಹಾಯಕ ಅರುಣ್, ಕಾರು ಚಾಲಕ ಸಂತೋಷ್, ಮಾಜಿ ಕಾಪೋರೇಟರ್ ಅಬ್ದುಲ್ ಹಾಗೂ ಆತನ ಶಿಷ್ಯ ಮಜ್ನು ಸೇರಿದಂತೆ 60 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಶಾಸಕರು, ಅವರ ಸೋದರರು, ನವೀನ್ ಕುಟುಂಬ ಸದಸ್ಯರು ಒಳಗೊಂಡಂತೆ ಹಲವು ಜನರ ಹೇಳಿಕೆಗಳು ದಾಖಲಾಗಿವೆ. 18 ಸಾಕ್ಷಿದಾರರ ಹೇಳಿಕೆಗಳನ್ನು ಪಡೆಯಲಾಗಿದೆ.
ಜಾಕೀರ್ ಗೈರು :ಗಲಭೆ ಪ್ರಕರಣದಲ್ಲಿ ವಿಚಾರಣೆ ನಡೆಸಲು ಆಗಮಿಸುವಂತೆ ಜಾಕೀರ್​ಗೆ ಸಿಸಿಬಿ 2ನೇ ಬಾರಿ ನೋಟಿಸ್ ನೀಡಿತ್ತು. ಸೋಮವಾರ ವಿಚಾರಣೆಗೆ ಜಾಕೀರ್ ಬರಬೇಕಿತ್ತು. ಆದರೆ, ಗೈರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
1 : 4 ಅನುಪಾತದ ಪ್ರತೀಕಾರ ತಗೊಳ್ತೇವೆ- ಟಿಎಂಸಿಗೆ ಬಿಜೆಪಿ ಕಡಕ್ ವಾರ್ನಿಂಗ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
