ಬೆಂಗಳೂರು:‘ಮಾದಕ’ ನಟಿ ರಾಗಿಣಿ ದ್ವಿವೇದಿ ಜೈಲಿಗೆ ಹೋಗುತ್ತಿದ್ದಂತೆ ಸ್ಯಾಂಡಲ್​ವುಡ್​ನ ಮತ್ತೊಂದು ಜೋಡಿಗೆ ಸಿಸಿಬಿ ನೋಟಿಸ್​ ಜಾರಿ ಮಾಡಿದೆ.
ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿರುವ ಸಿಬಿಬಿ, ನಾಳೆ(ಬುಧವಾರ) ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಲು ತಿಳಿಸಿದೆ.
ಶ್ರೀಲಂಕಾದಲ್ಲಿ ಕ್ಯಾಸಿನೋ ವ್ಯವಹಾರ ನಡೆಸುತ್ತಿದ್ದ ಶೇಖ್​ ಫಾಝಿಲ್​ ಶಾಸಕ ಜಮೀರ್​ ಅಹ್ಮದ್​ರ ಆಪ್ತ, ಡ್ರಗ್ಸ್ಕೇಸ್​ನ ಪ್ರಮುಖ ಆರೋಪಿ ಕೂಡ. ಫಾಝಿಲ್​ ಆಯೋಜಿಸುತ್ತಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಪಾಲ್ಗೊಳ್ಳುವಂತೆ ಚಿತ್ರನಟಿಯರಿಂದ ಮಾತನಾಡಿಸಿ ರಾಜಕಾರಣಿಗಳು ಮತ್ತು ಗಣ್ಯರ ಮಕ್ಕಳಿಗೆ ಆಹ್ವಾನ ನೀಡುತ್ತಿದ್ದ. ಇದೇ ರೀತಿ ಕನ್ನಡದ ‘ಮನಸಾರೆ’ ಬೆಡಗಿ ಐಂದ್ರಿತಾ ರೇ ಮೂಲಕವೂ ‘ಕೊಲೊಂಬೋಗೆ ನೀವೂ ಬನ್ನಿ, ನಾನು ಬರ್ತೀನಿ’ ಎಂದು ವಿಡಿಯೋ ಸಂದೇಶ ಮಾಡಿಸಿದ್ದ. ಈ ಬಗ್ಗೆ ಸೋಮವಾರ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು.
ಇದಕ್ಕೆ ಸ್ಪಷ್ಟನೆ ನೀಡಿದ್ದ ಐಂದ್ರಿತಾ ರೇ, ‘ಅದು ಮೂರು ವರ್ಷಗಳ ಹಿಂದಿನ ವಿಡಿಯೋ. ಸಿನಿಮಾ ಪ್ರಮೋಷನ್​ಗಾಗಿ ಶ್ರೀಲಂಕಾಗೆ ಹೋಗಿದ್ದೆ. ಸುಮಾರು-ನಟ-ನಟಿಯರು ಹೋಗಿದ್ದಾರೆ. ಸೆಲೆಬ್ರಿಟಿ ಆಗಿರೋದರಿಂದ ಪಾರ್ಟಿ ಬಗ್ಗೆ ಮಾತನಾಡಿಸಿದ್ದರು. ಆಗ ಫಾಝಿಲ್​ ಬಗ್ಗೆ ನನಗೇನೂ ಗೊತ್ತಿರಲಿಲ್ಲ. ನನಗೂ ಅವರಿಗೂ ಸಂಬಂಧವಿಲ್ಲ. ಡ್ರಗ್ಸ್​ ದಂಧೆ ಬಗ್ಗೆ ನನಗೇನೂ ಗೊತ್ತಿಲ್ಲ’ ಎಂದಿದ್ದರು.
‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’

ಫಾಝಿಲ್ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ರೇ, ಈ ಬಗ್ಗೆ ನಟಿ ಹೇಳಿದ್ದೇನು?

VIDEO / PHOTOS ಆದಿತ್ಯನ ಕೋಟೆಯಲ್ಲಿ ರಾತ್ರಿಪೂರ್ತಿ ನಡೆಯುತ್ತಿತ್ತು ಮೋಜು ಮಸ್ತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − eleven =
Remember me
