ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಶೆ ನಂಟಿನ ಪ್ರಕರಣದಲ್ಲಿ ಹಲವರ ನಂಟಿನ ವ್ಯಾಪ್ತಿ ವಿಸ್ತರಿಸಿಕೊಳ್ಳುತ್ತಲೇ ಇದ್ದು, ಇಂದು ಮತ್ತೆ ಮೂವರಿಗೆ ಸಿಸಿಬಿ ನೋಟಿಸ್​ ನೀಡಿದೆ.
ಈಗಾಗಲೇ ‘ಮಾದಕ’ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಮೊನ್ನೆಯಷ್ಟೇ ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ಗೆ ಸಿಸಿಬಿ ಬುಲಾವ್​ ನೀಡಿತ್ತು. ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಗುಳಿಕೆನ್ನೆಯ ಜೋಡಿಗೆ ಮತ್ತೊಮ್ಮೆ ಸಮನ್ಸ್​ ಕೊಡುವುದಾಗಿ ಸಿಸಿಬಿ ಪೊಲೀಸರು ಹೇಳಿ ಕಳುಹಿಸಿದ್ದರು. ಇದೀಗ ಕಿರುತೆರೆಯ ಖ್ಯಾತ ನಿರೂಪಕ ಅಕುಲ್​ ಬಾಲಾಜಿ, ನಟ ಸಂತೋಷ್​ ಕುಮಾರ್​, ಮಾಜಿ ಶಾಸಕ ಆರ್​.ವಿ.ದೇವರಾಜ್​ ಪುತ್ರ ಆರ್​.ವಿ. ಯುವರಾಜ್​ ಅವರಿಗೆ ನೋಟಿಸ್​ ನೀಡಲಾಗಿದೆ.ಇದನ್ನೂ ಓದಿರಿಸಿಸಿಬಿ ಕಚೇರಿಗೆ ವಕೀಲರ ಜೊತೆ ಬಂದ ಐಂದ್ರಿತಾ-ದಿಗಂತ್​
ಡ್ರಗ್ಸ್​ ಮಾಫಿಯಾದ ಜಾಡು ಹಿಡಿದು ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಹಲವರ ಬೆನ್ನಹಿಂದೆ ಬಿದ್ದಿದ್ದಾರೆ. ಈಗಾಗಲೇ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕಾಟನ್​ಪೇಟೆ ಪ್ರಕರಣದ ಪ್ರಮುಖ ಆರೋಪಿಗಳಾದ ಡ್ರಗ್ಸ್​ ಪೆಡ್ಲರ್​ಗಳು ವಿಚಾರಣೆ ವೇಳೆ ಮಹತ್ತರದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ಈ ಮೇರೆಗೆ ಅಕುಲ್​ ಬಾಲಾಜಿ, ಸಂತೋಷ್​ ಕುಮಾರ್​, ಯುವರಾಜ್​ ಆರ್​.ವಿ. ಅವರನ್ನೂ ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಲಾಗಿದೆ.
ಸಿಸಿಬಿ ಪೊಲೀಸರ ಮೊಬೈಲ್​ನಿಂದಲೇ ಡ್ರಗ್ಸ್​ ಪೆಡ್ಲರ್ ವೈಭವ್​ ಕಾಲ್​ ಮಾಡಿದ್ದು ಆ ಹೆಣ್ಣಿಗೆ…

‘ನಾವಿಬ್ಬರೂ ಒಟ್ಟಿಗೆ ಡ್ರಗ್ಸ್​ ಸೇವಿಸುತ್ತಿದ್ದೆವು, ಬಿಎಂಡಬ್ಲ್ಯು ಕಾರಿನಲ್ಲೇ ಹೋಟೆಲ್​ಗೆ ಕರೆದೊಯ್ಯುತ್ತಿದ್ದೆ…’

‘ರಾಗಿಣಿಗೆ ನಾನೇ ಡ್ರಗ್ಸ್​ ಕೊಡುತ್ತಿದ್ದೆ… ಡ್ರಗ್ಸ್​ ಅಡಗಿಸಿಟ್ಟಿರುವ ಜಾಗವನ್ನೂ ತೋರಿಸುವೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
