ಬೆಂಗಳೂರು:ಲಾಕ್​ಡೌನ್ ಸಡಿಲಿಕೆಯನ್ನೇ ಬಂಡವಾಳ ಮಾಡಿಕೊಂಡ ದುಷ್ಕರ್ಮಿಗಳು ಹೊರರಾಜ್ಯದಿಂದ ಅಮಾಯಕ ಹೆಣ್ಣು ಮಕ್ಕಳನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡುತ್ತಿರುವ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
ಇದನ್ನೂ ಓದಿ:8 ವರ್ಷಗಳಿಂದ ಭೇದಿಸಲಾಗದ ದರೋಡೆ ಪ್ರಕರಣವನ್ನು ಕ್ಷಣದಲ್ಲೇ ಪರಿಹರಿಸಿದ 6 ವರ್ಷದ ಬಾಲಕ!
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಶಿವಕುಮಾರ್ ಹಾಗೂ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಅಮಾಯಕ ಯುವತಿಯರಿಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದಿದ್ದರು ವೇಶ್ಯಾವಾಟಿಕೆಗೆ ದೂಡಿದ್ದರು ಎಂದು ತಿಳಿದುಬಂದಿದೆ.
ಮಾರತಹಳ್ಳಿ ಬಳಿ ದುಷ್ಕೃತ್ಯ ನಡೆಸುತ್ತಿದ್ದ ಆರೋಪಿಗಳು, ಫೋನ್ ಮೂಲಕ‌ ಗಿರಾಕಿಗಳಿಗೆ ಮಾಹಿತಿ ತಿಳಿಸಿ, ಸ್ಥಳಕ್ಕೆ ಕರೆಯಿಸಿಕೊಂಡು ಒಬ್ಬರಿಂದ 2 ರಿಂದ 3 ಸಾವಿರ ಹಣ ಪಡೆಯುತ್ತಿದ್ದರು ಎನ್ನಲಾಗಿದೆ.
ಇದನ್ನೂ ಓದಿ:VIDEO| ಸಿಸಿಟಿವಿಯಲ್ಲಿ ಸೆರೆಯಾಯ್ತು ಪಾಕ್​ ವಿಮಾನ ಪತನದ ಭೀಕರ ದೃಶ್ಯ…!
ಇನ್ನೂ ಪ್ರಕರಣದಲ್ಲಿ ಆರೋಪಿ‌ ಸ್ವಾತಿ ಅಲಿಯಾಸ್​ ಸರಸ್ವತಿ ತಲೆಮರೆಸಿಕೊಂಡಿದ್ದಾಳೆ. ಸದ್ಯ ಬಂಧಿತರಿಂದ 3 ಮೊಬೈಲ್‌ ಫೋನ್, 2910 ರೂ. ನಗದು ಹಾಗೂ ಕಾಂಡೋಮ್​ಗಳನ್ನು ವಶಕ್ಕೆ ಪಡೆಯಲಾಗಿದ್ದು, ಅಮಾಯಕ ಹೆಣ್ಣುಮಕ್ಕಳನ್ನು ರಕ್ಷಿಸಲಾಗಿದೆ. ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:Photo Gallery| ಬರ್ತಡೇ ಖುಷಿಯಲ್ಲಿ ಸಂಯುಕ್ತಾ: ಸ್ಯಾಂಡಲ್​ವುಡ್​ ಬೆಡಗಿಯ ಮುದ್ದಾದ ಚಿತ್ರಗಳು
ಕಂಟೇನ್​ಮೆಂಟ್​ ಜೋನ್​ನಲ್ಲಿ ಮನೆ ಮನೆಗೆ ತೆರಳುತ್ತಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಮಾಡುತ್ತಿರೋದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
