ಬೆಂಗಳೂರು :ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಬಾಲಿವುಡ್ ವರೆಗೂ ತಲುಪಿದೆ. ಮುಂಬೈನಲ್ಲಿರುವ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿಯ 6 ಅಧಿಕಾರಿಗಳ ನೇತೃತ್ವದ ತಂಡ ಗುರುವಾರ ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಆದಿತ್ಯ ಆಳ್ವ (ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ), ಪ್ರಕರಣ ಬೆಳಕಿಗೆ ಬರುತ್ತಿದಂತೆ ತಲೆಮರೆಸಿಕೊಂಡಿದ್ದಾರೆ. ಇಲ್ಲಿಯವರೆಗೂ ಆದಿತ್ಯ ಆಳ್ವ ಸೆರೆಸಿಕ್ಕಿಲ್ಲ. ಹೈಕೋರ್ಟ್‌ನಲ್ಲಿ ತನ್ನ ಮೇಲಿನ ಕೇಸ್ ಅನ್ನು ವಜಾ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಆರೋಪಿ ಆದಿತ್ಯ ಆಳ್ವ ಬಂಧನಕ್ಕೆ ಬಲೆಬೀಸಿರುವ ಸಿಸಿಬಿ ಅಧಿಕಾರಿಗಳು, ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದು ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದಿತ್ಯ ಆಳ್ವ ಅಡಗಿರುವ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಆಳ್ವ ಕುರಿತು ಮಾಹಿತಿ ಪಡೆಯುತ್ತಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ತಲೆಮರೆಸಿಕೊಂಡಿರುವ ಆದಿತ್ಯ ಆಳ್ವ ಹುಡುಕಾಟಕ್ಕೆ ಲುಕ್​ಔಟ್​ ನೋಟಿಸ್​ ಜಾರಿ
ಮಾವ, ಬಾಮೈದುನ :ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಪುತ್ರಿಯನ್ನು ವಿವೇಕ್ ಒಬೆರಾಯ್, ಮದುವೆ ಆಗಿದ್ದಾರೆ. ಅದಕ್ಕಾಗಿ ಬಾಮೈದುನ ಆದಿತ್ಯ ಆಳ್ವನನ್ನು ತಪ್ಪಿಸಿಕೊಳ್ಳಲು ಒಬೆರಾಯ್ ಸಹಾಯ ಮಾಡಿರುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಇದನ್ನೂ ಓದಿ:VIDEO / PHOTOS ಆದಿತ್ಯನ ಕೋಟೆಯಲ್ಲಿ ರಾತ್ರಿಪೂರ್ತಿ ನಡೆಯುತ್ತಿತ್ತು ಮೋಜು ಮಸ್ತಿ!
ಡ್ರಗ್ಸ್ ಪಾರ್ಟಿಗಳು :ಹೆಬ್ಬಾಳದ ಹೌಸ್ ಆಫ್ ಲೈಫ್​ ಎಂಬ ರೆಸಾರ್ಟ್‌ನಲ್ಲಿ ಸ್ಯಾಂಡಲ್‌ವುಡ್ ನಟ, ನಟಿಯರ ಜತೆ ಪೇಜ್-3 ಪಾರ್ಟಿಗಳನ್ನು ಮಾಡಿದ್ದಾರೆ. ಅಲ್ಲದೆ, ಪಾರ್ಟಿಗೆ ಡ್ರಗ್ಸ್ ಪೂರೈಕೆ ಮಾಡಿರುವ ಆರೋಪ ಕೇಳಿಬಂದಿತ್ತು. ಜತೆಗೆ ರೆಸಾರ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಡ್ರಗ್ಸ್ ಸಹ ಪತ್ತೆಯಾಗಿತ್ತು. ಈ ಎಲ್ಲ ಹಿನ್ನೆಲೆಯಲ್ಲಿ ಆದಿತ್ಯ ಆಳ್ವ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
ಡ್ರಗ್ಸ್ ಆರೋಪಿ ಆದಿತ್ಯ ಆಳ್ವನ ‘ಹೌಸ್​ ಆಫ್​ ಲೈಫ್’ ನೋಡಿದ್ರೆ ಬೆಚ್ಚಿಬೀಳ್ತೀರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
