ಬೆಂಗಳೂರು:ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ಸಂಭ್ರಮದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಡಿಕೆಶಿ ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್​ ಹೆಗ್ಡೆ ಪುತ್ರ ಅಮರ್ತ್ಯ ಅವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ಗುರುವಾರ(ನ.19) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್​ನಲ್ಲಿ ನೆರವೇರಿತು. ಅದೇ ದಿನ ಡಿಕೆಶಿ ಕಚೇರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್​ಗೆ ಸೂಚಿಸಿದೆ.
ಸಿಬಿಐ ಸಮನ್ಸ್​ ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಸಿಬಿಐನಿಂದ ಸಮನ್ಸ್ ಬಂದಿರುವುದು ನಿಜ. ನ.19ನೇ ತಾರೀಖು ನಮ್ಮ ಕಚೇರಿಗೆ ಬಂದು ಸಮನ್ಸ್ ಕೊಟ್ಟಿದ್ದು, ನ.23ಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ನಾಳೆಯಿಂದ(ನ.23) ನಾನು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿರುವೆ. ವಾಪಸ್​ ಬೆಂಗಳೂರಿಗೆ ನಾನು ಬರೋದು ನ.25ರ ಬೆಳಗ್ಗೆ. ಹಾಗಾಗಿ ಸಿಬಿಐ ಅಧಿಕಾರಿಗೆ ಕರೆ ಮಾಡಿ ಮನವಿ ಮಾಡಿದ್ದೇನೆ. ನ.25ರ ಮಧ್ಯಾಹ್ನ 4 ಗಂಟೆಗೆ ಸಿಬಿಐ ಕಚೇರಿಗೆ ಹಾಜರಾಗುವುದಾಗಿ ಹೇಳಿದ್ದೇನೆ. ಓಕೆ ಅಂತ ಹೇಳಿದ್ದಾರೆ ಎಂದು ವಿವರಿಸಿದರು.
ಕಳೆದ ಅಕ್ಟೋಬರ್ 5ರಂದು ಡಿಕೆಶಿ ಬ್ರದರ್ಸ್​ಗೆ ಸೇರಿದ ಬೆಂಗಳೂರು ಮತ್ತು ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು. 75 ಕೋಟಿ ಮೌಲ್ಯದ ಆಸ್ತಿ ದಾಖಲೆ ಹೊಂದಾಣಿಕೆ ಇಲ್ಲ ಎಂದು ಸಿಬಿಐ ಹೇಳಿತ್ತು. ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್​ ಜಾರಿ ಮಾಡಿದೆ.
ನಾನು ಬೀದಿಗೆ ಬಂದಿರುವೆ, ನನ್ನ ಕೈ ಹಿಡಿಯಿರಿ… ಎಂದು ಬೇಡಿದ ಅಖಂಡ ಶ್ರೀನಿವಾಸ ಮೂರ್ತಿ

ಡಿಕೆಶಿ ಪುತ್ರಿ, ಎಸ್​.ಎಂ.ಕೃಷ್ಣ ಮೊಮ್ಮಗನ ನಿಶ್ಚಿತಾರ್ಥ; ಗಣ್ಯರನೇಕರ ಉಪಸ್ಥಿತಿ, ಹಾರೈಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:17 − 14 =
Remember me
