ಬೆಂಗಳೂರು:ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ವಿವಾದಿತ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿರುವುದು ಬೆಳಕಿಗೆ ಬರುತ್ತಿದ್ದಂತೆ ಆ ಕುರಿತ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಇಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ನರೇಶ್​ ಗೌಡ ಹಾಗೂ ಶ್ರವಣ್ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇವರಿಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ರಮೇಶ್​ ಜಾರಕಿಹೊಳಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿರುವ ಸಂಬಂಧ ಇವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು.
ಇಂದು ಬೆಂಗಳೂರಿನ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಇವರಿಬ್ಬರ ಕಡೆಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಆಗಿದೆ. ನ್ಯಾಯಾಲಯವು ಈ ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಿಗದಿ ಮಾಡಿದೆ.
ಅಶ್ಲೀಲ ಸಿಡಿ ಕೇಸ್‌ಗೆ ಬಿಗ್ ಟ್ವಿಸ್ಟ್​! ವಿಡಿಯೋದಲ್ಲಿ ಇರುವುದು ನಾನೇ, ಸಹಮತದಿಂದ ಒಟ್ಟಿಗೆ ಇದ್ದೆವೆಂದ ಜಾರಕಿಹೊಳಿ

ಈ ಮಾಸ್ಕ್​​ನಲ್ಲಿ ಮೈಕ್​ ಇದೆ, ಸ್ಪೀಕರ್ ಇದೆ; ಅಪ್ಪ-ಅಮ್ಮನ ಕಷ್ಟ ನೋಡಿ ಮಗನೇ ಇದನ್ನು ತಯಾರಿಸಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 16 =
Remember me
