ಬೆಂಗಳೂರು:ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದ ಯುವತಿಗೆ ಕಬ್ಬನ್​ ಪಾರ್ಕ್​ ಪೊಲೀಸರು ನೋಟಿಸ್​ ಜಾರಿ ಮಾಡಿದ್ದಾರೆ.
ಶೀಘ್ರದಲ್ಲೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಯುವತಿಯ ಮನೆ, ಪಿಜಿ ಹಾಗೂ ಸ್ನೇಹಿತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಸವನ ಬಾಗೇವಾಡಿಯ ಆಕೆಯ ಮನೆಗೆ, ಸಂಬಂಧಿಕರಿಗೆ ಮತ್ತು ಸ್ನೇಹಿತರಿಗೆ ಪೊಲೀಸರು ನೋಟಿಸ್ ತಲುಪಿಸಿದ್ದಾರೆ. ಯುವತಿಗೆ ಶೀಘ್ರದಲ್ಲೇ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇದನ್ನೂ ಓದಿರಿ:ಯಾರೀ ಸುಂದರಿ? ಟಿ20 ಪಂದ್ಯದ ಸೋಲಿನ ನೋವು ಮರೆಸಿದ ಬ್ಯೂಟಿ ಹಿಂದೆ ಬಿದ್ದ ನೆಟ್ಟಿಗರು!
ನಿನ್ನೆ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಕೆಲವೇ ಕ್ಷಣಗಳಲ್ಲಿ, ಆ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಳು ಎನ್ನಲಾದ ಯುವತಿ ಕೂಡ ಹೇಳಿಕೆಯೊಂದನ್ನು ನೀಡಿ ಗೃಹಸಚಿವರು ರಕ್ಷಣೆ ಒದಗಿಸಬೇಕು ಎಂದು ಕೋರಿದ್ದಾಳೆ.
ಅಜ್ಞಾತ ಸ್ಥಳದಿಂದ 34 ಸೆಕೆಂಡ್​ನ ವಿಡಿಯೋ ಮಾಡಿ ಹರಿ ಬಿಟ್ಟಿರುವ ಯುವತಿ, ”ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ನನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ನನ್ನ ಮಾನ ಮರ್ಯಾದೆ ಊರು ತುಂಬಾ ಹರಾಜಾಗಿದೆ. ನನ್ನ ಮನೆ ಹತ್ತಿರ ಬಂದು ಯಾರೋರೊ ಏನೇನೋ ಹೇಳಿದ್ದಾರೆ. ನನ್ನ ತಂದೆ ತಾಯಿ ಹಾಗೂ ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇವೆ. ಆ ಅಶ್ಲೀಲ ವಿಡಿಯೋ ಹೇಗೆ ಮಾಡಿದಾರೋ ನನಗೆ ಗೊತ್ತಿಲ್ಲ. ದಯವಿಟ್ಟು ನನಗೆ ರಕ್ಷಣೆ ನೀಡಬೇಕು” ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಳು.
ಜಾರಕಿಹೊಳಿ ಸಿಡಿ ಪ್ರಕರಣ: ‘ಸಂತ್ರಸ್ತ’ ಯುವತಿಯ ನೆರವಿಗೆ ಧಾವಿಸಿದ ರಾಜ್ಯ ಮಹಿಳಾ ಆಯೋಗ

ಆಕೆಯ ವಿಡಿಯೋ ನಾನು ನೋಡಿಲ್ಲ, ಅದರ ಹಿಂದೆಯೂ ಷಡ್ಯಂತ್ರವಿದೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + six =
Remember me
