ಬೆಂಗಳೂರು: ಚೆಸ್ ಆಟವನ್ನು ಜನರಿಗೆ ಇನ್ನಷ್ಟು ಪರಿಚಯ ಮಾಡುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಚೆಸ್ ಹಬ್ಬ ಹಮ್ಮಿಕೊಳ್ಳಲಾಗಿತ್ತು.
ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಮಂಡಲ ಮತ್ತು ಅಖಿಲ ಭಾರತ ಚೆಸ್ ೆಡರೇಷನ್ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಚೆಸ್ ದಿನಾಚರಣೆ ಹಾಗೂ ಶತಮಾನೋತ್ಸವದ ಅಂಗವಾಗಿ ಈ ಹಬ್ಬ ಆಯೋಜಿಸಲಾಗಿತ್ತು.
ಸಚಿವರು, ಶಾಸಕರು ಮತ್ತು ಅಧಿಕಾರಿ/ಸಿಬ್ಬಂದಿಗಾಗಿ ಓಪನ್ ರಾಪಿಡ್ ಚೆಸ್ ಟೂರ್ನ್‌ಮೆಂಟ್ 2024 ಲೆಜಿಸ್ಲೇಚರ್ ಕಪ್-2024 ಚೆಸ್ ಪಂದ್ಯವನ್ನು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಫರೀದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬುದ್ಧಿವಂತರ ಆಟ ಎಂದೆ ಪರಿಗಣಿಸಲಾಗಿರುವ ಚೆಸ್ ಜನಪ್ರಿಯಗೊಳಿಸುವ ಉದ್ದೇಶದಿಂದ ಈ ಪಂದ್ಯ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ವರ್ಗದ ಜನರು ಚೆಸ್ ಆಟ ಆಡುತ್ತಾರೆ. ದೇಶ ವಿದೇಶದಲ್ಲೂ ಈ ಕ್ರೀಡೆಗೆ ಮನ್ನಣೆ ಇದೆ. ಈ ಆಟ ಆಡಲು ಬುದ್ಧಿವಂತಿಕೆ, ತಾಳ್ಮೆ ಬಹಳ ಮುಖ್ಯ ಇದನ್ನು ಹೆಚ್ಚು ಆಡಿದರೆ ಸಾಮಾನ್ಯರು ಬುದ್ಧಿವಂತರಾಗುತ್ತಾರೆ ಎಂದರು.
ಕೋವಿಡ್ ಸಮಯದಲ್ಲಿ ಸಹ ಬಹಳಷ್ಟು ಜನರು ಚೆಸ್ ಸೇರಿದಂತೆ ಇತರ ಆಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆಟದಲ್ಲಿ ಸೋಲು ಗೆಲುವು ಎರಡನ್ನು ಸಮವಾಗಿ ಸ್ವೀಕರಿಸುವ ಮನೋಭಾವವನ್ನು ನಾವು ಬೆಳಸಿಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯದ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಪಿ. ಅನಂತ್ ಮಾತನಾಡಿ, ಅಂತರಾಷ್ಟ್ರೀಯ ಚೆಸ್ ದಿನ ಹಾಗೂ ಲೆಜಿಸ್ಲೇಚರ್ ಕಪ್ 2024ನ್ನು ಹಮ್ಮಿಕೊಂಡಿರುವುದು ಸಂತೋಷದ ವಿಷಯ. ದೇಶದ ಗ್ರಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಪ್ರಖ್ಯಾತಿ ಪ್ರಶಸ್ತಿಗಳಿಸಿರುವುದು ಹೆಮ್ಮೆಯ ಸಂಗತಿ. ರಾಜ್ಯ ಸರ್ಕಾರಿ ಶಾಲೆಗಳಲ್ಲೂ ಚೆಸ್ ಅನ್ನು ಕಲಿಸಿ ಕೊಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಚೆಸ್ ಗ್ರಾಂಡ್ ಮಾಸ್ಟರ್ ತೇಜ್ ಕುಮಾರ್ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಶಾಸಕರ ಅಜಯ ಸಿಂಗ್, ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ, ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ, ಎಂ.ಕೆ ಟೂರ್ನಮೆಂಟ್ ಡೈರೆಕ್ಟರ್ ಎಂ.ಎಂ. ಸೌಮ್ಯ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
