ಬೆಂಗಳೂರು:ರಾಜ್ಯಕ್ಕೆ ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್​ ಟನ್​ ಅಕ್ಕಿಯನ್ನು 2025ರ ಮಾರ್ಚ್​ವರೆಗೆ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಬಿಪಿಎಲ್​ ಕಾರ್ಡ್​ನ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರುವ ಕಾಲ ಸನ್ನೀಹಿತವಾಗಿದೆ.
ಆಹಾರ ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ ( ಎಫ್​​​ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶ್ರೀದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬದಲು ಉಚಿತವಾಗಿ ಅಕ್ಕಿ ದೊರೆಯಲಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ತಕ್ಷಣವೇ ಅನ್ನಭಾಗ್ಯ ಸೇರಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದರು. ಅದರಂತೆ ಬಿಪಿಎಲ್​ ಕಾರ್ಡ್​ನ ಪ್ರತಿ ಸದಸ್ಯನಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದರಾದರೂ, ಅಕ್ಕಿ ಸಿಕ್ಕಿರಲಿಲ್ಲ. ಅಕ್ಕಿ ನೀಡುವಂತೆ ಕೇಂದ್ರದ ಬಳಿ ಅಂಗಲಾಚಿದ್ದರು. ವಿವಿಧ ರಾಜ್ಯಗಳ ಸಿಎಂಗೆ ಮನವಿ ಸಲ್ಲಿಸಿದ್ದರು. ಸಾಕಷ್ಟು ಪ್ರಯತ್ನಪಟ್ಟರೂ ಕಾಂಗ್ರೆಸ್​ ಸರ್ಕಾರಕ್ಕೆ ಅಕ್ಕಿ ಸಿಗಲಿಲ್ಲ. ಇದಕ್ಕಾಗಿ ಕೇಂದ್ರ&ರಾಜ್ಯಗಳ ನಡುವೆ ಅಕ್ಕಿಗಾಗಿ ದೊಡ್ಡ ಜಟಾಪಟಿಯೂ ನಡೆಯಿತು. ಅಂತಿಮವಾಗಿ ಬಿಪಿಎಲ್​, ಅಂತ್ಯೋದಯ ಕಾರ್ಡ್​ದಾರರಿಗೆ ಯೋಜನೆಯಡಿ ಅಕ್ಕಿ ಬದಲು ನಗದು ವರ್ಗಾವಣೆ ವ್ಯವಸ್ಥೆಯನ್ನು ಸರ್ಕಾರ, 2023ರ ಜು.10ರಿಂದ ಜಾರಿಗೆ ತಂದಿತ್ತು.
144 ಕೋಟಿ ರೂ.ಉಳಿತಾಯರಾಜ್ಯ ಸರ್ಕಾರ, ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್​ ಕಾರ್ಡ್​ನ ಪ್ರತಿ ಸದಸ್ಯನಿಗೆ ಕೆಜಿಗೆ 34 ರೂ.ನಂತೆ 5 ಕೆಜಿ ಅಕ್ಕಿಗೆ 170 ರೂ.ಗಳನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಹಾಕುತ್ತಿದೆ. ಅಂತ್ಯೋದಯ ಕಾರ್ಡ್​ನಲ್ಲಿ ನಾಲ್ಕು ಸದಸ್ಯರಿದ್ದರೆ ಕುಟುಂಬಕ್ಕೆ 170 ರೂ., ಐದು ಸದಸ್ಯರಿದ್ದರೆ 510 ರೂ., ಆರು ಸದಸ್ಯರಿದ್ದರೆ 850 ರೂ.,ಗಳನ್ನು ಹಾಕಲಾಗುತ್ತಿದೆ. ಯೋಜನೆಯಡಿ ಪ್ರತಿ ತಿಂಗಳು ಬಿಪಿಎಲ್​, ಅಂತ್ಯೋದಯ, ಎಪಿಎಲ್​ ಸೇರಿ ಒಟ್ಟು ಒಂದು ಕೋಟಿ ಕಾರ್ಡ್​ಗಳಿಗೆ 450-500 ಕೋಟಿ ರೂ.ಜಮೆ ಮಾಡಲಾಗುತ್ತದೆ.ಇದೀಗ ಕೇಂದ್ರದಿಂದ ಪ್ರತಿ ಕೆಜಿ ಅಕ್ಕಿಗೆ 28 ರೂ.ನಂತೆ ಸರಬರಾಜು ಮಾಡಲು ಒಪ್ಪಿಗೆ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಜ್ಯದ ಬೊಕ್ಕಸಕ್ಕೆ ಪ್ರತಿ ಕೆಜಿಗೆ 6 ರೂ. ಉಳಿತಾಯವಾಗಲಿದೆ. ಪ್ರತಿ ತಿಂಗಳು 12 ಕೋಟಿ ರೂ.ನಂತೆ ವರ್ಷಕ್ಕೆ 144 ಕೋಟಿ ರೂ. ಉಳಿತಾಯವಾಗಲಿದೆ.
ಒಎಂಎಸ್​ಎಸ್​ ಮೂಲಕ ಅಕ್ಕಿ ಖರೀದಿಗೆ ಖಾಸಗಿಯವರಿಗೆ ಅವಕಾಶ
ಪ್ರತಿ ಸದಸ್ಯನಿಗೆ ಸಿಗಲಿದೆ 10 ಕೆಜಿ ಪದಾರ್ಥರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್​ಎ್​ಎಸ್​ಎ) ಅನ್ವಯದಂತೆ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರ, ರಾಜ್ಯದ 1,16,95,029 ಬಿಪಿಎಲ್​, 10,88,421 ಅಂತ್ಯೋದಯ ಕಾರ್ಡ್​ಗಳಿಗೆ ಉಚಿತವಾಗಿ ಆಹಾರ ಪದಾರ್ಥ ವಿತರಿಸುತ್ತಿದೆ. ಹಾಗಾಗಿ, ಬಿಪಿಎಲ್​ ಕಾರ್ಡ್​ ಹೊಂದಿರುವ ಪ್ರತಿ ಸದಸ್ಯನಿಗೆ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಸೇರಿ ಒಟ್ಟು 5 ಕೆಜಿ ಹಾಗೂ ಪ್ರತಿ ಅಂತ್ಯೋದಯ ಕಾರ್ಡ್​ಗೆ 20 ಕೆಜಿ ಅಕ್ಕಿ, 15 ಕೆಜಿ ರಾಗಿ ಸೇರಿ ಒಟ್ಟು 35 ಕೆಜಿ ಆಹಾರ ಪದಾರ್ಥ ಉಚಿತವಾಗಿ ಸಿಗುತ್ತಿದೆ. ಇದೀಗ ರಾಜ್ಯವು ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್​ ಸದಸ್ಯನಿಗೆ 5 ಕೆಜಿ ಉಚಿತವಾಗಿ ಅಕ್ಕಿ ನೀಡಿದರೆ, ಇನ್ನುಮುಂದೆ ಬಿಪಿಎಲ್​ ಸದಸ್ಯನಿಗೆ 10 ಕೆಜಿ ಉಚಿತ ಆಹಾರ ಪದಾರ್ಥ ಸಿಗುವಂತಾಗಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × four =
Remember me
