ಬೆಂಗಳೂರು: ಕರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಕಾನ್ಪರೆನ್ಸ್​ನಲ್ಲಿ ಎಲ್ಲ ರಾಜ್ಯಗಳ ಆರೋಗ್ಯ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದು, ಕರ್ನಾಟಕ ತೆಗೆದುಕೊಂಡ ಕ್ರಮಗಳ ಬಗ್ಗೆ ಪೂರ್ಣ ಮಾಹಿತಿ ಪಡೆದ ಕೇಂದ್ರ ಸಚಿವರು, ಬೇರೆ ರಾಜ್ಯಗಳು ಕರ್ನಾಟಕದ ಮಾದರಿಯನ್ನು ಅನುಸರಿಸುವಂತೆ ಕರೆ ನೀಡಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಪ್ರಾರಂಭದಿಂದ ಇಲ್ಲಿಯ ತನಕ ಯಾವ್ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎನ್ನುವ ಮಾಹಿತಿ ವಿವರವಾಗಿ ಪಡೆದು ಕೊಂಡಿದ್ದಾರೆ. ಅಲ್ಲದೆ, ಡೇಂಜರ್ ಜೋನ್​ನಲ್ಲಿ ಅನುಸರಿಸುತ್ತಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ತಿಳಿಸಿದ್ದೇವೆ. ರಾಜ್ಯದಲ್ಲಿ ಅನುಸರಿಸುತ್ತಿರುವ ಕ್ರಮಗಳ ಬಗ್ಗೆ ಬೇರೆ ರಾಜ್ಯಗಳಿಗೆ ಸಲಹೆ ಕೊಡುವಂತೆಯೂ ತಿಳಿಸಿದ್ದಾರೆ ಎಂದು ವಿವರಿಸಿದರು.
ಪ್ಲಾಸ್ಮಾ ಚಿಕಿತ್ಸೆಗೆ ಇಂದು ಚಾಲನೆ:ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಈ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಯೇ ಈ ಥೆರಪಿ ಮಾಡಿಸಲಾಗುವುದು. ರಾಜ್ಯದ ಮೊದಲ ರೋಗಿಗೆ ಶನಿವಾರ ಪ್ಲಾಸ್ಮಾ ಥೆರಪಿ ಮಾಡಲು ಯೋಜಿಸಿದ್ದೇವೆ. ಥೆರಪಿಗೆ ಡೋನರ್ ಸಹ ಸಿಕ್ಕಿದ್ದಾರೆ ಎಂದು ಸಚಿವ ಸುಧಾಕರ್ ಹೇಳಿದರು.
ಮಾಹಿತಿ ಪೂರ್ಣ ಕಾನ್ಪರೆನ್ಸ್
ಕೇಂದ್ರ ಸಚಿವ ಡಾ.ಹರ್ಷವರ್ಧನ್ ಜತೆ ವಿಡಿಯೊ ಕಾನ್ಪರೆನ್ಸ್ ಮಾಹಿತಿ ಪೂರ್ಣವಾಗಿತ್ತು ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮಲು ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ್ದೇವೆ. ನಮ್ಮ ರಾಜ್ಯ ದೇಶದಲ್ಲಿ 11ನೇ ಸ್ಥಾನದಲ್ಲಿ ಇದೆ. ಎಲ್ಲ ಮುಂಜಾಗ್ರತೆ ವಹಿಸಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕೊಟ್ಟಿದ್ದೇವೆ ಎಂದರು. ರೆಡ್ ಜೋನ್ ವಾರ್ಡ್​ಗಳು ಸಂಪೂರ್ಣ ಲಾಕ್​ಡೌನ್ ಆಗಿವೆ. ಮುಂಜಾಗ್ರತೆ ವಹಿಸಿಯೇ 10 ಇಲಾಖೆಯ ಸಿಬ್ಬಂದಿ ಕೆಲಸಕ್ಕೆ ಅವಕಾಶ ನೀಡಿದ್ದೇವೆ ಎಂದರು.
ಕೋವಿಡ್​ ನಂತರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮರುರಚಿಸಬೇಕು; ಭಾರತದ ವಾದಕ್ಕೆ ಆಸ್ಟ್ರೇಲಿಯಾದ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
