ಬೆಂಗಳೂರು:ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ರೈತನಿಗೆ ಮಾಲ್ ಪ್ರವೇಶ ನಿರ್ಬಂಧ ಖಂಡನೀಯ: ಮಾಲ್ ಸೇರಿದಂತೆ ಇತರೆಡೆ ಪ್ರವೇಶಕ್ಕೆ ಶೀಘ್ರ ವಸ್ತ್ರ ಸಂಹಿತೆ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಸೋಮವಾರ ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರ್ನಾಟಕ ಅನೇಕ ಕ್ಷೇತ್ರಗಳಲ್ಲಿ ಒಳ್ಳೆಯ ಸಾಧನೆ. ಐಟಿ, ಬಿಟಿ ಕ್ಷೇತ್ರಗಳಲ್ಲಂತೂ ಜಗತ್ತಿನ ಗಮನ ಸೆಳೆದಿದೆ, ಈ ನಡುವೆ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಹಲವು ಆಡಳಿತಾತ್ಮಕ ಸಮಸ್ಯೆಗಳು ನಿರ್ಮಾಣವಾಗಿವೆ. ಅಭಿವೃದ್ಧಿ ನಿರ್ಲಕ್ಷ್ಯ ಜೊತೆಗೆ ಹಲವು ಸಮಸ್ಯೆಗಳು ಇವೆ. ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂ. ಅವ್ಯವಹಾರ ಆಗಿದೆ ಎಂದರು.
ಈ ನಿಗಮದ ಹಣ ತೆರಿಗೆಯಿಂದ ಸಂಗ್ರಹವಾಗಿದೆ. ಪರಿಶಿಷ್ಟ ಸಮುದಾಯದವರಿಗಾಗಿ ಈ ಹಣ ಬಳಕೆ ಆಗಬೇಕಿತ್ತು. ಅವರಿಗೆ ಬಳಕೆ ಆಗದೆ ಬೇನಾಮಿ ಖಾತೆಗಳಿಗೆ ವರ್ಗಾವಣೆ ಮೂಲಕ ಇಷ್ಟು ದೊಡ್ಡ ಪ್ರಮಾಣದ ಹಣ ದುರುಪಯೋಗ ಆಗಿದ್ದು, ಪರಿಶಿಷ್ಟ ಸಮಾಜದ ಬಂಧುಗಳ ಕಲ್ಯಾಣ ಚಟುವಟಿಕೆಗೆ ತೊಂದರೆ ಆಗಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿಗಳೇ ಸ್ವತಃ ಹಣಕಾಸಿನ ಇಲಾಖೆಯನ್ನೂ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಆಡಳಿತ ವ್ಯವಸ್ಥೆಯ ದುರುಪಯೋಗ ಆಗಿದೆ. ಟ್ರೆಜರಿ ಮೂಲಕ ಇದರ ವರ್ಗಾವಣೆ ಆಗಿದ್ದಾಗಿ ರಾಜ್ಯ ಸರ್ಕಾರವು ಒಪ್ಪಿಕೊಂಡಿದೆ ಎಂದು ತಿಳಿಸಿದರು.
ರಾಜ್ಯದ ಪರಿಶಿಷ್ಟರ ಕಲ್ಯಾಣ ಇಲಾಖೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮವಿದ್ದು, ಅದರಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದ ಆರೋಪವಿದೆ. ಖಜಾನೆಯಿಂದ 187 ಕೋಟಿ ರೂಪಾಯಿ ಬೇನಾಮಿ ಖಾತೆಗಳಿಗೆ ಜಮಾ ಆದ ಮಾಹಿತಿ ಲಭಿಸಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದಲ್ಲಿ ಆಡಳಿತಾತ್ಮಕವಾದ ಅನೇಕ ಸಮಸ್ಯೆಗಳು ನಿರ್ಮಾಣವಾಗಿದೆ. ಅದರಲ್ಲೂ ವಿಶೇಷವಾಗಿ ಅಭಿವೃದ್ಧಿಗೆ ನಿರ್ಲಕ್ಷ್ಯದ ಜೊತೆಯಲ್ಲಿ ಬೇರೆ ಬೇರೆ ಅನೇಕ ವಿಷಯಗಳಿದ್ದು, ಅವನ್ನು ಇಲ್ಲಿ ಪ್ರಸ್ತಾಪಿಸಲು ಬಯಸುತ್ತಿಲ್ಲ ಎಂದು ನುಡಿದರು.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
