ಬೆಂಗಳೂರು:ಮಳೆಯ ತೀವ್ರ ಕೊರತೆಯಿಂದ ರಾಜ್ಯ ಎದುರಿಸುತ್ತಿರುವ ಬರ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ತಂಡ, ಗುರುವಾರದಿಂದ ನಾಲ್ಕು ದಿನ ರಾಜ್ಯ ಪ್ರವಾಸ ಮಾಡಲಿದೆ. ರಾಜ್ಯದಲ್ಲಿ ಶೇ.20 ಮಳೆ ಕೊರತೆಯಿಂದಾಗಿ ಭೀಕರ ಬರ ಎದುರಾಗಿದೆ. ಸರ್ಕಾರ 195 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಿದೆ. 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದ್ದು, ತಕ್ಷಣ 3,800 ಕೋಟಿ ರೂ. ಪರಿಹಾರ ನೀಡುವಂತೆ ಕೋರಿದ ಹಿನ್ನೆಲೆ ಕೇಂದ್ರ ಅಧ್ಯಯನ ತಂಡ ರವಾನಿಸಿದೆ. ಕೇಂದ್ರ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್​ಕುಮಾರ್ ಸಾಹು ನೇತೃತ್ವದಲ್ಲಿ 10 ಅಧಿಕಾರಿಗಳು ಬಂದಿದ್ದು 3 ತಂಡವಾಗಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅ.5 ರಂದು ಮೂರೂ ತಂಡಗಳು ಬೆಳಗ್ಗೆ ರಾಜ್ಯ ಪೃಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಮಳೆ ಕೊರತೆ, ಬೆಳೆ ಪರಿಸ್ಥಿತಿ, ಜಲಾಶಯ ಹಾಗೂ ಕೆರೆ-ಕಟ್ಟೆಗಳ ನೀರಿನ ಸ್ಥಿತಿಯ ಮಾಹಿತಿ ಪಡೆಯಲಿವೆ. ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ರಾಜ್ಯ ಪ್ರವಾಸಕ್ಕೆ ತೆರಳಲಿವೆ. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಚಲುವರಾಯಸ್ವಾಮಿ ಭಾಗವಹಿಸುವ ಸಾಧ್ಯತೆಗಳಿವೆ.
ಸಚಿವರ ಸೂಚನೆ:ಕೇಂದ್ರ ತಂಡ ಜಿಲ್ಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಈ ಸಾಲಿನ ಮಳೆಯ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಹಲವು ಕಡೆ ಸಂಪೂರ್ಣ ಬೆಳೆಹಾನಿಯಾಗಿದ್ದು, ಕೆಲವೆಡೆ ಬೆಳೆ ಇದ್ದರೂ ಉಂಟಾಗಲಿರುವ ತೀವ್ರ ಇಳುವರಿ ಕುಸಿತದ ಬಗ್ಗೆ ಪರಿಣಾಮ ಕಾರಿಯಾಗಿ ವಿವರಿಸಿ ಅರ್ಥ ಮಾಡಿಕೊಡಬೇಕು. ಹಸಿರು ಬರದ ಕುರಿತು ಮಾಹಿತಿ ಒದಗಿಸಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಪ್ರವಾಸ:ಕೇಂದ್ರ ಕೃಷಿ ಅಜಿತ್​ಕುಮಾರ್ ಸಾಹು ನೇತೃತ್ವದ ಮೊದಲ ತಂಡದಲ್ಲಿ ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆಯ ನಿರ್ದೇಶಕ ಡಾ. ಜೆ.ಪೊನ್ನುಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ, ರಾಜ್ಯ ಕೃಷಿ ಆಯುಕ್ತ ವಿ.ಎಸ್. ಪಾಟೀಲ್ ಇರಲಿದ್ದಾರೆ. ಈ ತಂಡ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ನೇತೃತ್ವದ ಎರಡನೇ ತಂಡದಲ್ಲಿ ಪಶುಸಂಗೋಪನೆ ಇಲಾಖೆ ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆ ಸಹಾಯಕ ಆಯುಕ್ತ ಮೋತಿರಾಂ , ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಇರಲಿದ್ದಾರೆ. ಈ ತಂಡ ಗದಗ, ಕೊಪ್ಪಳ, ಬಳ್ಳಾರಿ, ವಿಜಯನರ ಜಿಲ್ಲೆಗಳಲ್ಲಿ ಸಂಚರಿಸಿ ಮಾಹಿತಿ ಪಡೆಯಲಿದೆ. ಕೇಂದ್ರ ಜಲ ಆಯೋಗದ ನಿರ್ದೇಶಕ ವಿ.ಅಶೋಕ್​ಕುಮಾರ್ ನೇತೃತ್ವದ ಮೂರನೇ ತಂಡದಲ್ಲಿ ಎಂ.ಎನ್ ಸಿ.ಎಫ್ ಸಿ ಉಪ ನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಶ್ರೀನಿವಾಸ ರೆಡ್ಡಿ ಇರಲಿದ್ದಾರೆ. ಈ ತಂಡವು ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ.
ಇಬ್ಬರು ಮಕ್ಕಳನ್ನು ನೋಡಿಕೊಳ್ಳೋ ಆಯಾಗೆ 80 ಲಕ್ಷ ರೂ. ಸಂಬಳ ಕೊಡ್ತಾರಂತೆ!

ಈ ಮಾತ್ರೆಗಳನ್ನು ನೀವು ತಿನ್ನೋದು ಸಹಜ; ಆದರೆ ಇದರ ಅಡ್ಡಪರಿಣಾಮಗಳು ಒಂದೆರಡಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
